ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ಹುಬ್ಬಳ್ಳಿ: ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ವೈಯಕ್ತಿಕ ಕಾರಣಗಳಿಗೆ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದಕ್ಕೆ ಮೃತಳ ತಂದೆ ನಿರಂಜನ ಹಿರೇಮಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಗುರವಾದ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ ಎಂದು ಬೇಸರ ಹೊರಹಾಕಿದ್ದಾರೆ.
ಮುಖ್ಯಮಂತ್ರಿಯವರು ಅಷ್ಟು ಹಗುರವಾಗಿ ಹೇಗೆ ಮಾತಾಡುತ್ತಾರೆ? ವೈಯಕ್ತಿಕ ಕಾರಣಗಳಿಗೆ ಕೊಲೆಯಾಗಿದೆ ಎಂದರೆ ಏನರ್ಥ? ನಾನು ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್ ಎಂಬುದು ಅವರಿಗೆ ಗೊತ್ತಿರಲಿ, ಈ ಪ್ರಕರಣವನ್ನು ಇಡೀ ರಾಜ್ಯ ನೋಡುತ್ತಿದೆ, ಅವರು ಹಗುರವಾದ ಹೇಳಿಕೆಗಳನ್ನು ನೀಡಿದರೆ ತನ್ನ ಮನೆತನದ ಗೌರವ ಏನಾಗಬೇಕು? ಎಂದು ಅವರು ಹೇಳಿದ್ದಾರೆ.

ರಾಜ್ಯದ ಜನತೆ ಸಿದ್ದರಾಮಯ್ಯ ಅವರ ಮೇಲೆ ಪ್ರೀತಿ, ವಿಶ್ವಾಸವಿಟ್ಟು 135 ಸ್ಥಾನಗಳಲ್ಲಿ ಗೆಲ್ಲಿಸಿದ್ದಾರೆ. ಇಂದು ಕಾಂಗ್ರೆಸ್ ಅಧಿಕಾರದಲ್ಲಿದೆ. ರಾಜ್ಯದ ಮುಖ್ಯಮಂತ್ರಿ ಆಗಿರುವ ಅವರು, ನಮ್ಮ ಕುಟುಂಬ ಅನುಭವಿಸುತ್ತಿರುವ ನೋವನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಎನ್​ಕೌಂಟರ್ ಮಾಡಿ ಸಾಯಿಸಬೇಕು
ನನ್ನ ಮಗಳನ್ನು ಕೊಂದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಅಷ್ಟು ಸಾಲದು, ಅವನನ್ನು ಎನ್​ಕೌಂಟರ್ ಮಾಡಿ ಸಾಯಿಸಬೇಕು. ಈ ಕೊಲೆಯ ಹಿಂದೆ ಅವನ ಜೊತೆ ಇನ್ನೂ ನಾಲ್ಕು ಜನ ಇದ್ದಾರೆ. ಅವರನ್ನೂ ಬಂಧಿಸಬೇಕು ಎಂದು ನಿರಂಜನ ಹಿರೇಮಠ ಆಗ್ರಹಿಸಿದ್ದಾರೆ.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement