ಕೊಲಂಬೊ: ಶ್ರೀಲಂಕಾದ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ಬುಧವಾರ ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾ ಅಧಿಕಾರ ವಹಿಸಿಕೊಂಡರು, ಗೋತಬಯ ರಾಜಪಕ್ಸೆ ಅವರು ದೇಶದಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ನಡುವೆ ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ ಕೆಲವೇ ಗಂಟೆಗಳ ನಂತರ ರಾನಿಲ್ ವಿಕ್ರಮಸಿಂಘೆ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಹಂಗಾಮಿ ಅಧ್ಯಕ್ಷರಾಗಿ ಅವರು ದೇಶಾದ್ಯಂತ ತುರ್ತು ಪರಿಸ್ಥಿತಿಯನ್ನು (ದೇಶಾದ್ಯಂತ) ಘೋಷಿಸಿದ್ದಾರೆ ಮತ್ತು ಪಶ್ಚಿಮ ಪ್ರಾಂತ್ಯದಲ್ಲಿ ಕರ್ಫ್ಯೂ ವಿಧಿಸಿದ್ದಾರೆ” ಎಂದು ವಿಕ್ರಮಸಿಂಘೆ ಅವರ ಮಾಧ್ಯಮ ಕಾರ್ಯದರ್ಶಿ ದಿನೌಕ್ ಕೊಲಂಬಗೆ ತಿಳಿಸಿದ್ದಾರೆ ಎಂದು ರಾಯಟರ್ಸ್ ವರದಿ ಮಾಡಿದೆ. ಕರ್ಫ್ಯೂ ತಕ್ಷಣದಿಂದಲೇ ಜಾರಿಗೆ ಬರುತ್ತದೆ.
ವಿಕ್ರಮಸಿಂಘೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿರುವುದರಿಂದ ದ್ವೀಪ ರಾಷ್ಟ್ರದಾದ್ಯಂತ ಪ್ರತಿಭಟನೆ ಮುಂದುವರೆದಿದೆ. ಕೋಪಗೊಂಡ ಪ್ರತಿಭಟನಾಕಾರರ ಗುಂಪೊಂದು ಭದ್ರತಾ ಪಡೆಗಳ ಅಶ್ರುವಾಯು ಶೆಲ್‌ಗಳನ್ನು ಎದುರಿಸಿ ಲಂಕಾ ಪ್ರಧಾನಿ ನಿವಾಸಕ್ಕೆ ನುಗ್ಗಿತು.ಹಿಂದಿನ ದಿನ, ರಾಜಪಕ್ಸೆ ದೇಶದಿಂದ ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ್ದಾರೆ. ಅಲ್ಲಿ ಅವರನ್ನು ಸ್ಪೀಕರ್ ಮೊಹಮ್ಮದ್ ನಶೀದ್ ಸ್ವಾಗತಿಸಿದರು. ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಪ್ರತಿಭಟನಾಕಾರರ ಬೇಡಿಕೆಗೆ ಮಣಿದ ಅವರು ಇಂದು, ಬುಧವಾರ ರಾಜೀನಾಮೆ ನೀಡಲು ಒಪ್ಪಿದರು.
ರಾಜಪಕ್ಸೆ ವಿರುದ್ಧದ ಪ್ರತಿಭಟನೆಗಳು ತಿಂಗಳುಗಟ್ಟಲೆ ಮುಂದುವರೆದಿವೆ ಮತ್ತು ಕಳೆದ ವಾರಾಂತ್ಯದಲ್ಲಿ ಸಾವಿರಾರು ಪ್ರತಿಭಟನಾಕಾರರು ಅಧ್ಯಕ್ಷರ ಭವನ ಮತ್ತು ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕಿದಾಗ ಅದು ಇನ್ನಷ್ಟು ತೀವ್ರಗೊಂಡಿತು. ದೇಶದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿಗೆ ರಾಜಪಕ್ಸೆ ಕುಟುಂಬವೇ ಕಾರಣ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ, ಆರ್ಥಿಕ ಬಿಕ್ಕಟ್ಟಿನಿಂದಾಗಿ ನಾಗರಿಕರು ಇಂಧನ, ಆಹಾರ ಮತ್ತು ಔಷಧಿಗಳಿಗಾಗಿ ಪರದಾಡುತ್ತಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ