‘ನ ದೈನ್ಯಂ, ನ ಪಲಾಯನಂ’: ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಗೈರಾದ ಬೆನ್ನಲ್ಲೇ ಶಾಸಕ ಯತ್ನಾಳ​ ಟ್ವೀಟ್​

ಬೆಂಗಳೂರು : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕನ ನೇಮಕದ ವಿಚಾರವಾಗಿ ಅಸಮಾಧಾನಗೊಂಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಗೈರಾದ ಬೆನ್ನಲ್ಲೇ ‘ನ ದೈನ್ಯಂ, ನ ಪಲಾಯನಂ’ ಎಂದು ಮಾರ್ಮಿಕವಾಗಿ
ಟ್ವೀಟ್‌ ಮಾಡಿದ್ದಾರೆ.
ಒಬ್ಬ ಯೋಧ ಯಾವುದನ್ನೂ ದೂರಲು ಅಥವಾ ವಿಷಾದಿಸಲು ಸಾಧ್ಯವಿಲ್ಲ. ಆತನ ಜೀವನವು ಅಂತ್ಯವಿಲ್ಲದ ಸವಾಲು, ಹಾಗೂ ಆ ಸವಾಲುಗಳು ಬಹುಶಃ ಒಳ್ಳೆಯದು ಅಥವಾ ಕೆಟ್ಟದ್ದಾಗಿರಲು ಸಾಧ್ಯವಿಲ್ಲ. ಸವಾಲುಗಳು ಕೇವಲ ಸವಾಲುಗಳಾಗಿರುತ್ತವೆ ಎಂದು ಅವರು ಬರೆದಿದ್ದಾರೆ.

ಶುಕ್ರವಾರ ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಅದಕ್ಕೂ ಉತ್ತರ ಕರ್ನಾಟಕ ಭಾಗಕ್ಕೆ ಅವಕಾಶ ನೀಡಬೇಕು ಎಂದು ಯತ್ನಾಳ ಅವರು ತಮ್ಮನ್ನು ಭೇಟಿ ಮಾಡಿದ ವೀಕ್ಷಕರ ಬಳಿ ಪ್ರಸ್ತಾಪ ಮಾಡಿದ್ದರು. ಉತ್ತರ ಕರ್ನಾಟಕಕ್ಕೆ ಅವಕಾಶ ನೀಡಬೇಕು ಎಂಬ ಬೇಡಿಕೆ ಮಂಡಿಸಿದ್ದರು. ಆದರೆ ಈ ವೇಳೆ ಬಿಜೆಪಿ ಹೈಕಮಾಂಡ್ ತೀರ್ಮಾನವನ್ನು ವೀಕ್ಷಕರು ಅವರಿಗೆ ಹೇಳಿದ್ದಾರೆ. ಆದರೆ ಅವರು ತಕ್ಷಣವೇ ಅಲ್ಲಿಂದ ಹೊರನಡೆದಿದ್ದಾರೆ. ಯತ್ನಾಳ ಜೊತೆ ಸಭೆಯಿಂದ ಹೊರನಡೆದ ನಂತರ ಶಾಸಕ ರಮೇಶ ಜಾರಕಿಹೊಳಿ ಕೂಡ ಹೊರನಡೆದ್ದಾರೆ.
ನ ದೈನ್ಯಂ, ನ ಪಲಾಯನಂ ಎಂದರೆ ತಲೆ ಬಾಗುವುದಿಲ್ಲ, ಪಲಾಯನ ಮಾಡುವುದಿಲ್ಲ ಎಂದಾಗುತ್ತದೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement