ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಶವ ಪತ್ತೆ

ಸೂರತ್ : ಗುಜರಾತ್‌ನ ಸೂರತ್‌ನಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯ ಪ್ರಕಾರ, ಆರು ಮಂದಿ ವಿಷಕಾರಿ ಪದಾರ್ಥಗಳನ್ನು ಸೇವಿಸಿ ಮೃತಪಟ್ಟಿದ್ದಾರೆ. ಏಳನೇ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಮನೀಶ್ ಸೋಲಂಕಿ, ಅವರ ಪತ್ನಿ ರೀಟಾ, ತಂದೆ ಕಾನು, ತಾಯಿ ಶೋಭಾ ಮತ್ತು ಅವರ ಮೂವರು ಚಿಕ್ಕ ಮಕ್ಕಳಾದ ದಿಶಾ, ಕಾವ್ಯ ಮತ್ತು ಕುಶಾ ಎಂದು ಗುರುತಿಸಲಾಗಿದೆ.
ಉಳಿದವರು ವಿಷಕಾಋಿ ಪದಾರ್ಥ ಸೇವಿಸಿ ಮೃತಪಟ್ಟರೆ ಮನೀಶ್ ಸೋಲಂಕಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೆ, ಸೋಲಂಕಿ ಅವರೇ ಬರೆದಿರುವ ಆತ್ಮಹತ್ಯೆ ಪತ್ರವು ಮನೆಯಲ್ಲಿ ಕಂಡುಬಂದಿದೆ. ಈ ಪತ್ರದಲ್ಲಿ ಅವರು ಹಣಕಾಸಿನ ತೊಂದರೆಗಳ ಬಗ್ಗೆ ಬರೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ ಹಣಕಾಸಿನ ಸಮಸ್ಯೆಗಳ ಬಗ್ಗೆ ನಿಖರವಾದ ಮಾಹಿತಿ ತಿಳಿದಿಲ್ಲ ಎಂದು ಹೇಳಲಾಗಿದೆ.
ಮನೀಶ್ ಸೋಲಂಕಿ ಅವರು ಪೀಠೋಪಕರಣ ವ್ಯಾಪಾರದಲ್ಲಿ ತೊಡಗಿಕೊಂಡಿದ್ದರು. ಶನಿವಾರ ಬೆಳಿಗ್ಗೆ ಅವರ ಉದ್ಯೋಗಿಗಳು ಫೋನ್ ಕರೆ ಮಾಡಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಇದಕ್ಕೆ ಸೋಲಂಕಿ ಅವರಿಂದ ಉತ್ತರ ಬಂದಿಲ್ಲ. ಹೀಗಾಗಿ ಹೋಗಿ ಅವರ ಮನೆಯ ಬಾಗಿಲು ತಟ್ಟಿದಾಗ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಸಹದ್ಯೋಗಿಗಳು ಎಂದು ಹೇಳಿದ್ದಾರೆ. ಇದರ ಪರಿಣಾಮವಾಗಿ ಸ್ಥಳೀಯರು ಮನೆಯ ಒಳಗೆ ಪ್ರವೇಶಿಸಲು ಮನೆಯ ಹಿಂಭಾಗದ ಕಿಟಕಿಯನ್ನು ಒಡೆದರು ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ತನ್ನ ಡ್ರೋನ್‌ಗಳ ಮೇಲೆ ಭಾರತದ ದಾಳಿಯಿಂದ ಪಾರಾಗಲು ಪ್ರಯಾಣಿಕ ವಿಮಾನಗಳನ್ನು ಬಳಸಿಕೊಂಡು ಪಾಕಿಸ್ತಾನ ಸೇನೆ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement