ದೇವಸ್ಥಾನದ ಬಳಿಯಿದ್ದ ಬೃಹತ್ ಮರ ಉರುಳಿ 7 ಮಂದಿ ಸಾವು, 5 ಮಂದಿಗೆ ಗಾಯ

ಅಕೋಲಾ (ಮಹಾರಾಷ್ಟ್ರ) : ಮಹಾರಾಷ್ಟ್ರದ ಅಕೋಲಾದಲ್ಲಿ ಭಾನುವಾರ ಟಿನ್ ಶೆಡ್‌ನ ಮೇಲೆ ಬೃಹತ್ ಮರವೊಂದು ಬಿದ್ದು ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ.
ರಾತ್ರಿ 7 ಗಂಟೆ ಸುಮಾರಿಗೆ ದೇವಸ್ಥಾನದ ಮುಂಭಾಗದಲ್ಲಿ ಧಾರ್ಮಿಕ ಸಮಾರಂಭದಲ್ಲಿ ಈ ಘಟನೆ ನಡೆದಿದ್ದು, ಭಾರೀ ಮಳೆ ಮತ್ತು ಬಲವಾದ ಗಾಳಿಯಿಂದಾಗಿ ಹಳೆಯ ಬೇವಿನ ಮರವೊಂದು ತಗಡಿನ ಶೆಡ್‌ನ ಮೇಲೆ ಬಿದ್ದಿದ್ದು, ಅದರ ಅಡಿಯಲ್ಲಿ ಹಲವಾರು ಭಕ್ತರು ಆಶ್ರಯ ಪಡೆದಿದ್ದರು. ಪೋಲೀಸರ ಪ್ರಕಾರ, 35 ರಿಂದ 40 ಜನರು ಶೆಡ್ ಅಡಿಯಲ್ಲಿ ಸಿಲುದರು ಮತ್ತು ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.ಗಾಯಗೊಂಡ ಐವರನ್ನು ಅಕೋಲಾ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ತಕ್ಷಣ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ, ಮರದ ಕಾಂಡ ಮತ್ತು ಕುಸಿದ ಶೆಡ್ ಅನ್ನು ಮೇಲೆತ್ತಲು ಜೆಸಿಬಿ ಯಂತ್ರಗಳನ್ನು ತರಲಾಯಿತು.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಾವಿಗೆ ಸಂತಾಪ ಸೂಚಿಸಿದ್ದು, ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಿದೆ ಎಂದು ಘೋಷಿಸಿದ್ದಾರೆ.
ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧೀಕ್ಷಕರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದರು ಮತ್ತು ಗಾಯಾಳುಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಲು ಸಮನ್ವಯಗೊಳಿಸುತ್ತಿದ್ದಾರೆ. ನಾವು ಅವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ” ಎಂದು ದೇವೇಂದ್ರ ಫಡ್ನವಿಸ್‌ ಹೇಳಿದ್ದಾರೆ.
ಕೆಲ ಗಾಯಾಳುಗಳನ್ನು ಜಿಲ್ಲಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಣ್ಣ ಪುಟ್ಟ ಗಾಯಾಳುಗಳಿಗೆ ಬಾಳಾಪುರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು. ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು ನೀಡಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ನಿರ್ಧರಿಸಿದ್ದಾರೆ.

ಪ್ರಮುಖ ಸುದ್ದಿ :-   ಮಹದೇವ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣದಲ್ಲಿ ನಟ ಸಾಹಿಲ್ ಖಾನ್ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement