ಉಡುಪಿ ವೀಡಿಯೊ ಚಿತ್ರೀಕರಣ ಪ್ರಕರಣ ; ತನಿಖಾಧಿಕಾರಿ ಬದಲಾವಣೆ

ಉಡುಪಿ : ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಮಾಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ.
ಮಲ್ಪೆ ಇನ್ ಸ್ಪೆಕ್ಟರ್ ಮಂಜುನಾಥ್ ಗೌಡ ಅವರ ಬದಲು ಕುಂದಾಪುರ ಡಿವೈಎಎಸ್‌ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.
ಈ ಹಿಂದಿನ ತನಿಖಾಧಿಕಾರಿಯಾಗಿದ್ದ ಮಲ್ಪೆ ಠಾಣೆಯ ಇನ್ ಸ್ಪೆಕ್ಟರ್ ಮಂಜುನಾಥ ಗೌಡ ಅವರನ್ನು ವರ್ಗಾಯಿಸಬೇಕೆಂಬ ಆಗ್ರಹ ಕೇಳಿಬಂದ ನಂತರ ಅವರನ್ನು ಬದಲಾಯಿಸಿ ಕುಂದಾಪುಡ ಡಿವೈಎಸ್ಪಿ ಬೆಳ್ಳಿಯಪ್ಪ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ನೇಮಿಸಿದ್ದಾರೆ ಎಂದು ವರದಿ ತಿಳಿಸಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಶಿರಸಿ ; ಹಾಸ್ಟೆಲ್ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ

ನಿಮ್ಮ ಕಾಮೆಂಟ್ ಬರೆಯಿರಿ

advertisement