ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನ ಘೋಷಿಸಿದ ಎನ್‌ಐಎ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಪ್ರಮುಖ ಆರೋಪಿಗಳ ಪತ್ತೆಗೆ ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ಎನ್​ಐಎ(National Investigation Agency) ನಗದು ಬಹುಮಾನ ಘೋಷಣೆ ಮಾಡಿದೆ.
ಇಬ್ಬರ ಆರೋಪಿ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ರೂಪಾಯಿ ಹಾಗೂ ಇನ್ನಿಬ್ಬರ ಆರೋಪಗಳ ಬಗ್ಗೆ ಮಾಹಿತಿ ತಿಳಿಸಿದರೆ 2 ಲಕ್ಷ ಬಹುಮಾನ ರೂ. ನಗದು ಬಹುಮಾನ ನೀಡುವುದಾಗಿ ಎನ್‌ಐಎ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿಗಾಗಿ ಒಟ್ಟು 14 ಲಕ್ಷ ರೂ.ಗಳ ನಗದು ಬಹುಮಾನ ನೀಡುವಾಗಿ ಎನ್​ಐಎ ಘೋಷಿಸಿದೆ. ಅದರಲ್ಲಿ ಮೊಹಮ್ಮದ್ ಮುಸ್ತಫಾ ಮತ್ತು ತುಫೈಲ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ಹಾಗೂ ಉಳಿದ ಆರೋಪಿಗಳಾದ ಉಮರ್ ಫಾರೂಕ್‌ ಹಾಗೂ ಅಬೂಬಕರ್ ಸಿದ್ದಿಕ್‌ ಬಗ್ಗೆ ಮಾಹಿತಿ ನೀಡಿದವರಿಗೆ 2 ಲಕ್ಷ ಬಹುಮಾನ ರೂಪಾಯಿ ನಗದು ಬಹುಮಾನ ನೀಡುವಾಗಿ ಎನ್​ಐಎ ಪ್ರಕಟಣೆಯಲ್ಲಿ ತಿಳಿಸಿದೆ ಹಾಗೂ ಮಾಹಿತಿಯನ್ನು ಗೌಪ್ಯವಾಗಿ ಇರಿಸಲಾಗುವುದು ಎಂದು ಹೇಳಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಹಗರಣ: ಮಧ್ಯಂತರ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ ರೇವಣ್ಣ

ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಅವರನನ್ನು ಜುಲೈ 26 ರಂದು ಬೆಳ್ಳಾರೆಯಲ್ಲಿರವ ಅವರ ಕೋಳಿ ಅಂಗಡಿ ಬಳಿಯೇ ಹಂತಕರು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಇಡೀ ರಾಜ್ಯಾದ್ಯಂತ ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು. ನಂತರ ಸರ್ಕಾರ ಈ ಪ್ರಕರಣವನ್ನು ಎನ್​ಐಎ ತನಿಖೆಗೆ ವಹಿಸಿತ್ತು.
ಪ್ರವೀಣ್ ಹತ್ಯೆ ನಡೆದು ಎರಡು ತಿಂಗಳುಗಳೇ ಕಳೆದಿದ್ದರೂ ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಇಲ್ಲಿಯ ತನಕ ಅವರ ಸುಳಿವು ಲಭ್ಯವಾಗಿಲ್ಲ. ಇದೀಗ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ನಾಲ್ವರು ಆರೋಪಿಗಳ ಪತ್ತೆಗೆ ಎನ್‌ಐಎ ಬಹುಮಾನ ಘೋಷಿಸಿದೆ. ತಲೆಮರೆಸಿಕೊಂಡ ಆರೋಪಿಗಳಾದ ಮಹಮ್ಮದ್ ಮುಸ್ತಾಫ ಬೆಳ್ಳಾರೆ, ತುಫೈಲ್ ಮಡಿಕೇರಿ ಅವರ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 5 ಲಕ್ಷ ನೀಡುವುದಾಗಿ ಘೋಷಿಸಲಾಗಿದೆ.

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement