ಕುಮಟಾ : ರಾಜ್ಯ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ಕೂಜಳ್ಳಿಯ ಸಂಧ್ಯಾ ಹೆಗಡೆ ದ್ವಿತೀಯ

ಕುಮಟಾ: ರಾಷ್ಟ್ರಕವಿ ಡಾ.ಜಿ.ಎಸ್.ಎಸ್. ಪ್ರತಿಷ್ಠಾನ  ಶಿವಮೊಗ್ಗ ವತಿಯಿಂದ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಸಂಧ್ಯಾ ವಿನಾಯಕ ಹೆಗಡೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಈ ಗೀತ ಗಾಯನ ಸ್ಪರ್ಧೆಯಲ್ಲಿ ಕರ್ನಾಟಕದ ವಿವಿಧ ಭಾಗದ 83 ಸ್ಪರ್ಧಾಳುಗಳು ಭಾಗವಹಿಸಿದ್ದು ಅಂತಿಮ ಸುತ್ತಿಗೆ ಕೇವಲ 10 ಸ್ಪರ್ಧಿಗಳು ಆಯ್ಕೆಯಾಗಿದ್ದರು. ಶಿವಮೊಗ್ಗದಲ್ಲಿ ಫೆಬ್ರವರಿ 10 ರಂದು ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಅವರು ದ್ವಿತೀಯ ಸ್ಥಾನ ಪಡೆಯುವ ಮೂಲಕ ಗೋಕರ್ಣದ ಸ್ವರಾತ್ಮ ಗುರುಕುಲಕ್ಕೆ ಮತ್ತು ತಾಲೂಕಿಗೆ ಕೀರ್ತಿ ತಂದಿದ್ದಾರೆ. ಇವರು ಲೆಕ್ಕ ಪರಿಶೋಧಕರಾದ ಕುಮಟಾದ ವಿನಾಯಕ ಹೆಗಡೆ ಅವರ ಪತ್ನಿ. ಇವರ ಈ ಸಾಧನೆಗೆ ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾ ಪೀಠಮ್, ಅಶೋಕೆಯ ಸ್ವರಾತ್ಮ ಗುರುಕುಲದ ಪ್ರಾಚಾರ್ಯ ಡಾ. ಹರೀಶ ಹೆಗಡೆ ಅಭಿನಂದಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement