ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ: ಶೇ. 53.81 ಮತದಾನ, ಹಕ್ಕು ಚಲಾಯಿಸಿದ ಕೋವಿಡ್‌ ಸೋಂಕಿತ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗಾಗಿ ಇಂದು (ಶುಕ್ರವಾರ) ಮತದಾನ ಶಾಂತಿಯುತವಾಗಿ ನಡೆಯಿತು.
ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಶಾಂತಿಯುತವಾಗಿ ಮತದಾನ ನಡೆದಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಒಟ್ಟು 8,18,096 ಅರ್ಹ ಮತದಾರರ ಪೈಕಿ 4,40,251 ಮತದಾರರು ಮತ ಚಲಾಯಿಸಿದ್ದು, ಶೇ 53.81 ರಷ್ಟು ಮತದಾನವಾಗಿದೆ ಎಂದು ಅವರು ತಿಳಿಸಿದ್ದಾರೆ.

82 ವಾರ್ಡ್ ಗಳಲ್ಲಿ ಒಟ್ಟು 842 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಅದರಲ್ಲಿ 292 ಸೂಕ್ಷ್ಮ, 93 ಅತೀಸೂಕ್ಷ್ಮ ಮತ್ತು 457 ಸಾಮಾನ್ಯ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು, ಎಲ್ಲ ಮತಗಟ್ಟೆಗಳಲ್ಲಿಯೂ ಶಾಂತಿಯುತವಾಗಿ ಮತದಾನವಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೋವಿಡ್‌ ಸೋಂಕಿತನಿಂದ ಮತದಾನ..
ಕೋವಿಡ್ ಸೋಂಕಿತ 52 ವರ್ಷದ ಮತದಾರರೊಬ್ಬರು ಮತ ಚಲಾಯಿಸಿದ್ದಾರೆ. ವಾರ್ಡ್ 49ರ ಶಿರೂರು ಪಾರ್ಕ್, ಅಕ್ಷಯ ಕಾಲೋನಿಯ ಐಬಿಎಂಆರ್ ಕಾಲೇಜಿನಲ್ಲಿ ಸ್ಥಾಪಿಸಿರುವ ಬೂತ್ ನಂಬರ್ 2 ರಲ್ಲಿ ಕೋವಿಡ್ ನಿಯಮಾನುಸಾರ ತಮ್ಮ ಮತದಾನದ ಹಕ್ಕು ಚಲಾಯಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ವೈದ್ಯಾಧಿಕಾರಿ ಡಾ.ಶ್ರೀಧರ್ ದಂಡೆಪ್ಪನವರು ಸೇರಿದಂತೆ ವೈದ್ಯರುಗಳಾದ ಡಾ. ಪ್ರಕಾಶ್, ಡಾ.ಕೋಮಲ್ ಹಾಗೂ ನರ್ಸಿಂಗ್ ಸಿಬ್ಬಂದಿ ಮಂಜುಳ ಹಾಗೂ ರಾಮ್ ಉಪಸ್ಥಿತರಿದ್ದರು.

ಪ್ರಮುಖ ಸುದ್ದಿ :-   ಬೆಂಗಳೂರಲ್ಲಿ 'ಸಿಮ್ ಬಾಕ್ಸ್' ಜಾಲ ಪತ್ತೆ ; ನಾಲ್ವರ ಬಂಧನ, 320 ಸಿಮ್‌ ಕನೆಕ್ಷನ್‌ ಸಾಮರ್ಥ್ಯದ 10 ಸಾಧನ ವಶ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement