ನಾಳೆ ಸಿಎಂ ಬೊಮ್ಮಾಯಿ ದೆಹಲಿಗೆ ಭೇಟಿ; ಸಂಪುಟ ವಿಸ್ತರಣೆ ಚರ್ಚೆ ಮುನ್ನಲೆಗೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ನವದೆಹಲಿಗೆ ತೆರಳಲಿದ್ದು, ಬೆಳಗ್ಗೆ ಎಂಟು ಗಂಟೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಹೇಳಲಾಗಿದೆ.ಈ ಹಿನ್ನೆಲೆಯಲ್ಲಿ ರಾಜ್ಯ ಸಂಪುಟ ವಿಸ್ತರಣೆ/ಪುನಾರಚನೆಯ ಸುದ್ದಿ ಮತ್ತೆ ಚರ್ಚೆಗೆ ಬಂದಿದೆ.
ದೆಹಲಿ ಭೇಟಿ ವೇಳೆ ಮುಖ್ಯಮಂತ್ರಿ ಬೊಮ್ಮಾಯಿ ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದು, ನಂತರ ಸಂಜೆ ‘ಇನ್ವೆಸ್ಟ್ ಕರ್ನಾಟಕ‌’ ವಿಚಾರವಾಗಿ ವಿವಿಧ ದೇಶಗಳ ರಾಯಭಾರಿಗಳು ಹಾಗೂ ಹೈ ಕಮಿಷನರ್‌ಗಳನ್ನು ಭೇಟಿ ಮಾಡಲಿದ್ದಾರೆ. ಭೇಟಿ ವೇಳೆ ರಾಜ್ಯದಲ್ಲಿ ಹೂಡಿಕೆ ಸಂಬಂಧ ಆಯಾ ದೇಶಗಳಲ್ಲಿ ರೋಡ್ ಶೋ ಮಾಡುವ ನಿಟ್ಟಿನಲ್ಲಿ ಚರ್ಚೆ ಮಾಡಲಿದ್ದಾರೆ ಎನ್ನಲಾಗಿದೆ.

ಮಂಗಳವಾರ ರಾತ್ರಿ ದೆಹಲಿಯಲ್ಲೇ ಇರುವ ಅವರು, ಮಂಗಳವಾರ ರಾತ್ರಿ ಅಥವಾ ಬುಧವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಮುಖ್ಯಮಂತ್ರಿ ಬೊಮ್ಮಾಯಿ ಪಕ್ಷದ ವರಿಷ್ಠರ ಭೇಟಿಯ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ ಪಕ್ಷದ ವರಿಷ್ಠರು ಭೇಟಿಗೆ ಒಂದು ವೇಳೆ ಗ್ರೀನ್ ಸಿಗ್ನಲ್‌ ನೀಡಿದರೆ ಒಂದು ವಾರದೊಳಗೆ ಸಂಪುಟ ಸರ್ಜರಿ ಆಗುವ ಸಾಧ್ಯತೆ ನಿಚ್ಚಳವಾಗಿದೆ.

ಪ್ರಮುಖ ಸುದ್ದಿ :-   ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement