ಪೊಲೀಸರು ಅನುಮತಿ ನಿರಾಕರಿಸಿದ ನಂತರ ಕೊಯಮತ್ತೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋಗೆ ಮದ್ರಾಸ್ ಹೈಕೋರ್ಟ್ ಅನುಮತಿ

ಚೆನ್ನೈ: ಮಾರ್ಚ್ 18 ರಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಲ್ಕು ಕಿಮೀ ರೋಡ್ ಶೋ ನಡೆಸಲು ಮದ್ರಾಸ್ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.
ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎನ್ ಆನಂದ ವೆಂಕಟೇಶ ಅವರು ರೋಡ್ ಶೋಗೆ ವ್ಯವಸ್ಥೆ ಮಾಡುವಂತೆ ಕೊಯಮತ್ತೂರು ಪೊಲೀಸರಿಗೆ ಆದೇಶಿಸಿದರು. ರೋಡ್ ಶೋ ನಡೆಸಲು ಅನುಮತಿ ನಿರಾಕರಿಸಿದ ಪೊಲೀಸರ ಆದೇಶವನ್ನು ಪ್ರಶ್ನಿಸಿ ರಮೇಶಕುಮಾರ ಎಂಬವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮದ್ರಾಸ್‌ ಹೈಕೋರ್ಟ್‌ ಅನುಮತಿ ನೀಡಿ ಆದೇಶಿಸಿದೆ.
ಮೋದಿ ಶುಕ್ರವಾರ ಹೈದರಾಬಾದ್‌ನಲ್ಲಿ ರೋಡ್‌ಶೋ ನಡೆಸಿದರು. ಕೇಸರಿ ಬಣ್ಣದ ಟೋಪಿ ಧರಿಸಿದ್ದ ಮೋದಿ ತೆರೆದ ವಾಹನದಲ್ಲಿ ನಿಂತು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನರತ್ತ ಕೈ ಬೀಸಿ ಶುಭಾಶಯ ಕೋರಿದರು.
ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಜಿ. ಕಿಶನ್ ರೆಡ್ಡಿ ಮತ್ತು ಮಲ್ಕಾಜ್‌ಗಿರಿಯ ಪಕ್ಷದ ಅಭ್ಯರ್ಥಿ ಈಟಾಲ ರಾಜೇಂದರ ಮೋದಿ ಅವರ ಪಕ್ಕದಲ್ಲಿದ್ದರು. ಮಾರ್ಚ್ 16 ಮತ್ತು ಮಾರ್ಚ್ 18 ರಂದು ತೆಲಂಗಾಣದಲ್ಲಿ ಬಿಜೆಪಿ ರ್ಯಾಲಿಗಳನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಕುಮಟಾ : ಬಾಡದಲ್ಲಿ 26 ಗಂಟೆಗಳ ನಂತರ ಮನೆಗೆ ನುಗ್ಗಿದ್ದ ಚಿರತೆ ಬಂಧಿ ; ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿದರು...

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement