ಬೆಳಗಾವಿ ಜಿಲ್ಲೆಯಲ್ಲಿ ಮೂವರು ಮಕ್ಕಳ ಸಾವು ; ಇಬ್ಬರ ಅಮಾನತು

ಬೆಳಗಾವಿ/ಬೆಂಗಳೂರು: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮೂವರು ಮಕ್ಕಳ ನಿಗೂಢ ಸಾವಿಗೆ ಸಂಬಂಧಿಸಿ ಇಬ್ಬರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಜನವರಿ 12 ರಂದು ರಾಮದುರ್ಗ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲ ಮಕ್ಕಳಿಗೆ ಚುಚ್ಚುಮದ್ದು ಹಾಕಲಾಗಿತ್ತು.ಆಗ ಅವರ ಆರೋಗ್ಯದಲ್ಲಿ ಏರುಪೇರು ಕಂಡು ನಂತರ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಸೆಪ್ಟಿಕ್ ಶಾರ್ಟ್ಸ್ ಸಿಂಡ್ರೋಮ್ ನಿಂದ ಮಕ್ಕಳು ಮೃತಪಟ್ಟಿರಬಹುದು ಎಂಬ ಅನುಮಾನವಿದೆ. ಈ ಬಗ್ಗೆ ಉನ್ನತ ತನಿಖೆಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಇಡೀ ಪ್ರಕರಣದ ತನಿಖೆ ನಡೆಸಿ ವರದಿ ನೀಡಲು 2 ದಿನಗಳ ಕಾಲಾವಕಾಶ ನೀಡಲು ಸೂಚಿಸಿದ್ದೇನೆ. ಎಎನ್ಎಂ ಮತ್ತು ಫಾರ್ಮಸಿಸ್ಟ್ ಗಳನ್ನು ಸಸ್ಪೆಂಡ್ ಮಾಡಲು ತಿಳಿಸಿದ್ದೇನೆ ಎಂದು ಅವರು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement