ಭಾರೀ ಅಗ್ನಿ ಅವಘಡ: 7 ಮಂದಿ ಸಜೀವ ದಹನ

ನವದೆಹಲಿ: ಶನಿವಾರ ದೆಹಲಿಯ ಗೋಕುಲಪುರಿ ಪ್ರದೇಶದ ಗುಡಿಸಲುಗಳಲ್ಲಿ ಸಂಭವಿಸಿದ ಭಾರಿ ಬೆಂಕಿ ಅನಾಹುತದಲ್ಲಿ ಏಳು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕನಿಷ್ಠ 60 ಗುಡಿಸಲುಗಳು ಬೆಂಕಿಗೆ ಆಹುತಿಯಾಗಿವೆ.
ನಾವು ಗುರುತಿಸಲಾಗದ 7 ಸುಟ್ಟ ದೇಹಗಳನ್ನು ವಶಪಡಿಸಿಕೊಂಡಿದ್ದೇವೆ, ಈ ಜನರು ಮಲಗಿದ್ದರು ಮತ್ತು ಬೆಂಕಿ ಅತ್ಯಂತ ವೇಗವಾಗಿ ಹರಡಿದ್ದರಿಂದ ಅವರಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. 60 ಗುಡಿಸಲುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಬೆಂಕಿಯ ಹಿಂದಿನ ಕಾರಣಗಳು ನಮಗೆ ಇನ್ನೂ ತಿಳಿದಿಲ್ಲ ಎಂದು ದೆಹಲಿ ಅಗ್ನಿಶಾಮಕ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಂತಾಪ ಸೂಚಿಸಿದ್ದು, ಅಗ್ನಿ ಅವಘಡದಲ್ಲಿ ಸಂತ್ರಸ್ತರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.
ಈಶಾನ್ಯ ದೆಹಲಿಯ ಸಂಸದ ಮನೋಜ್ ತಿವಾರಿ ಅವರು ಏಳು ಜನರ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಕೇಜ್ರಿವಾಲ್‌ ಅವರನ್ನು ಒತ್ತಾಯಿಸಿದ್ದಾರೆ. “ಇಡೀ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ಕುಟುಂಬಕ್ಕೆ ತಕ್ಷಣವೇ 1 ಕೋಟಿ ರೂಪಾಯಿ ನೆರವು ಘೋಷಿಸಬೇಕು” ಎಂದು ಅವರು ಹೇಳಿದರು. ಮನೋಜ್ ತಿವಾರಿ ಇಂದು ಗೋಕುಲಪುರಿ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.
ಬೆಂಕಿ ಅನಾಹುತದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ.

ಪ್ರಮುಖ ಸುದ್ದಿ :-   ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿಯನ್ನು ಹೊರಹಾಕಿದ ಭಾರತ; 24 ಗಂಟೆಯೊಳಗೆ ದೇಶ ತೊರೆಯಲು ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement