ಕಾರವಾರ: ಈದ್ ಮಿಲಾದ್ ಅಂಗವಾಗಿ ನಡೆದ ಮೆರವಣಿಗೆ ವೇಳೆ ಕೆಲವರು ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಬಂಡಿಬಜಾರ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಪೊಲೀಸರು ಮಧ್ಯಪ್ರವೇಶಿಸಿ ಧ್ವಜವನ್ನು ವಶಕ್ಕೆ ಪಡೆದಿದ್ದಾರೆ.
ಧ್ವಜ ಪ್ರದರ್ಶಿಸಿದ ಯುವಕನಿಗೆ ಪೊಲೀಸರು ಎಚ್ಚರಿಕೆ ನೀಡಿದ್ದು, ಬಳಿಕ ಮೆರವಣಿಗೆ ಶಾಂತಿಯುತವಾಗಿ ನಡೆಯಿತು. ಅಂಕೋಲಾ ಪಟ್ಟಣದ ಬೊಬ್ರುವಾಡದಿಂದ ಆರಂಭಗೊಂಡ ಮೆರವಣಿಗೆ ಬಂಡಿಬಜಾರ್ ಬಳಿ ಸಾಗುತ್ತಿದ್ದ ವೇಳೆ ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಿರುವುದು ಪೊಲೀಸರ ಗಮನಕ್ಕೆ ಬಂದಿದೆ. ನಂತರ ಅಂಕೋಲಾ ಸಿಪಿಐ ಚಂದ್ರಶೇಖರ ಮಠಪತಿ ಅವರು ಧ್ವಜವನ್ನು ವಶಕ್ಕೆ ಪಡೆದರಲ್ಲದೆ, ಮೆರವಣಿಗೆಯಲ್ಲಿ ಇಂತಹ ಧ್ವಜಗಳನ್ನು ಪ್ರದರ್ಶಿಸದಂತೆ ಖಡಕ್ ಎಚ್ಚರಿಕೆ ನೀಡಿ ಮೆರವಣಿಗೆ ಶಾಂತಿಯುತವಾಗಿ ಮುಂದುವರಿಯಲು ಅವಕಾಶ ಮಾಡಿಕೊಟ್ಟರು. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ನಿಗಾ ವಹಿಸಿದರು.


ನಿಮ್ಮ ಕಾಮೆಂಟ್ ಬರೆಯಿರಿ