ಬೆಂಗಳೂರು: ಸಾರ್ವಜನಿಕ ಕುಂದು ಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಕಚೇರಿಯು ಹೊಸ ಟ್ವಿಟರ್ ಖಾತೆಯನ್ನು ಆರಂಭಿಸಿದೆ. ಸಾರ್ವಜನಿಕರು ಕುಂದು ಕೊರತೆಗಳನ್ನು ಈ ಟ್ವಿಟರ್ ಖಾತೆಗೆ ಟ್ಯಾಗ್ ಮಾಡಿ ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳ ಗಮನಕ್ಕೆ ತರಬಹುದಾಗಿದೆ.
ಈ ಕುರಿತಾಗಿ ಮುಖ್ಯಮಂತ್ರಿ ಕಚೇರಿ ಮಾಧ್ಯಮ ಪ್ರಕಟನೆ ಮೂಲಕ ತಿಳಿಸಿದ್ದು, https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು ಎಂದು ಹೇಳಿದೆ.
ಸಾರ್ವಜನಿಕ ಕುಂದುಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ. ಸಾರ್ವಜನಿಕರಿಗೆ ನೆರವಾಗುವುದು ಇದರ ಉದ್ದೇಶವಾಗಿದೆ. ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಇದಕ್ಕೆ ಟ್ಯಾಗ್ ಮಾಡಬಹುದಾಗಿದೆ.
ಸಾರ್ವಜನಿಕ ಕುಂದುಕೊರತೆಗಳನ್ನು ಮಾತ್ರ ಮುಖ್ಯಮಂತ್ರಿಗಳ ಕಚೇರಿಯ ಈ ಖಾತೆಗೆ ಟ್ಯಾಗ್ ಮಾಡಬಹುದಾಗಿದೆ. ವೈಯುಕ್ತಿಕ ಸಮಸ್ಯೆಗಳನ್ನು ಈ ಖಾತೆಗೆ ಟ್ಯಾಗ್ ಮಾಡದೆ ಅವುಗಳನ್ನು ನೇರವಾಗಿ ಸಂಬಂಧಪಟ್ಟವರ ಗಮನಕ್ಕೆ ತರಬಹುದು” ಎಂದು ಮಾಧ್ಯಮ ಪ್ರಕಟಣೆಯಲ್ಲಿ ಸಿಎಂ ಕಚೇರಿ ತಿಳಿಸಿದೆ.


ನಿಮ್ಮ ಕಾಮೆಂಟ್ ಬರೆಯಿರಿ