ಕರ್ನಾಟಕದಲ್ಲಿ ಒಂದು ವಾರ ಮತ್ತೆ ಭಾರಿ ಮಳೆ ಸಾಧ್ಯತೆ ; 16 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಶೇಷವಾಗಿ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅದು ಹೇಳಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಮೈಸೂರು, ಮಂಡ್ಯ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಕಲಬುರ್ಗಿ, ಬೀದರ್, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ವಿಜಯನಗರ, ಕೋಲಾರ ಜಿಲ್ಲೆಗಳಲ್ಲಿಯೂ ಮಳೆ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement