ಅತಿಥಿ ಶಿಕ್ಷಕರ ಗೌರವಧನ; 175.05 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ

ಬೆಂಗಳೂರು: 2022-23ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಸ್ಥಾನಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರ ಶಿಕ್ಷಕರ ಸಂಭಾವನೆಗಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.
ರಾಜ್ಯದ ತಾಲೂಕು ಪಂಚಾಯತ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ 2022-23ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ 175.05 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
ಬಿಡುಗಡೆಯಾದ ಅನುದಾನವನ್ನು ವಿಳಂಬ ಮಾಡದಂತೆ ತಾಲ್ಲೂಕು ಪಂಚಾಯತಗಳ ಮೂಲಕ ತಕ್ಷಣ ಬಳಕೆ ಮಾಡಿಕೊಳ್ಳಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಪ್ರಾಥಮಿಕ ಶಾಲೆಗಳ 27 ಸಾವಿರ ಅತಿಥಿ ಶಿಕ್ಷಕರಿಗೆ ₹ 135.66 ಕೋಟಿ, ಪ್ರೌಢಶಾಲೆಗಳ 5,159 ಅತಿಥಿ ಶಿಕ್ಷಕರಿಗೆ ₹ 39.39 ಕೋಟಿ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಸ್ತಾವ ಸಲ್ಲಿಸಿತ್ತು.

4 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement