ಈಗ ಬೈಂದೂರು ಕಾಲೇಜಿನಲ್ಲೂ ಹಿಜಾಬ್ ವಿವಾದ: ಕೇಸರಿ ಶಾಲು ಧರಿಸಿದ ಬಂದ ವಿದ್ಯಾರ್ಥಿಗಳು

ಬೈಂದೂರು: ಉಡುಪಿ , ಕುಂದಾಪುರ ಕಾಲೇಜಿನಲ್ಲಿ ಹಿಜಾಬ್ ವಿವಾದ ಪ್ರಕರಣದ ಬೆನ್ನಲ್ಲೇ ಇದೀಗ ಬೈಂದೂರು ಕಾಲೇಜಿನಲ್ಲಿ ಇಂಥದ್ದೇ ವಿವಾದ ಉಂಟಾಗಿದೆ.
ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಹಾಜರಾಗಿದ್ದಾರೆ, ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರೂ ತರಗತಿಗೆ ಪ್ರವೇಶ ಪಡೆದಿದ್ದಾರೆ.
ಬೈಂದೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್‌ ಧರಿಸಿ ಕಾಲೇಜು ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಕಾಲೇಜಿನ ಸುಮಾರು 300ಕ್ಕೂ ಅಧಿಕ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಈ ವೇಳೆಯಲ್ಲಿ ಕಾಲೇಜಿನ ಉಪನ್ಯಾಸಕರು ಸಮವಸ್ತ್ರ ಧರಿಸಿದರೆ ಮಾತ್ರವೇ ತರಗತಿಗೆ ಪ್ರವೇಶ ನೀಡುವುದಾಗಿ ತಿಳಿಸಿದ್ದಾರೆ. ಈ ವೇಳೆ ಉಪನ್ಯಾಸಕರು ಹಾಗೂ ಸಂಘಟನೆಗಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

ಕುಂದಾಪುರದಲ್ಲಿ ಪ್ರತಿಭಟನೆ..:

ಕುಂದಾಪುರದ ಜೂನಿಯರ್ ಕಾಲೇಜು ನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಗಳಿಗೆ ಪ್ರವೇಶ ನಿರಾಕರಣೆ ಮಾಡಿದ ಕಾರಣಕ್ಕಾಗಿ ಶಾಲೆಗೆ ಪೋಷಕರು ಮುತ್ತಿಗೆ ಹಾಕಿದ ಘಟನೆ ಶುಕ್ರವಾರ ನಡೆದಿದೆ.
ಇಂದು, ಶುಕ್ರವಾರ ಮತ್ತೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ತರಗತಿಗೆ ಸೇರಿಸಲು ಕಾಲೇಜಿನ ಪ್ರಾಂಶುಪಾಲುರು ನಿರಾಕರಿಸಿದ್ದಾರೆ. ಹಿಜಾಬ್ ಧರಿಸಿ ಕ್ಯಾಂಪಸ್ ಗೇಟ್ ದಾಟಿ ಒಳಗೆ ಬಂದ ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲರು ಮೈದಾನದಲ್ಲೇ ತಡೆದು ನಿಲ್ಲಿಸಿದ್ದಾರೆ. ಇಂದು ವಿದ್ಯಾರ್ಥಿನಿಯರ ಜೊತೆ ಪೋಷಕರು ಕಾಲೇಜಿಗೆ ಆಗಮಿಸಿದ್ದು, ಮಕ್ಕಳನ್ನು ಒಳಗೆ ಬಿಡುವಂತೆ ಪ್ರತಿಭಟನೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   6 ವರ್ಷ ನರೇಂದ್ರ ಮೋದಿ ಅನರ್ಹತೆ : ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement