ಕೆನಡಾ ಮೂಲದ ಗ್ಯಾಂಗ್‌ಸ್ಟರ್‌ ಲಖ್ಬೀರ್ ಸಿಂಗ್ ಭಯೋತ್ಪಾದಕ ಎಂದು ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ : ಕೆನಡಾ ಮೂಲದ 33 ವರ್ಷದ ಗ್ಯಾಂಗ್‌ಸ್ಟರ್‌ ಲಖ್ಬೀರ್ ಸಿಂಗ್ ಲಾಂಡಾನನ್ನು ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಭಯೋತ್ಪಾದಕ ಎಂದು ಗೃಹ ಸಚಿವಾಲಯ ಘೋಷಿಸಿದೆ.
ಕೇಂದ್ರ ಗೃಹ ಸಚಿವಾಲಯದ (MHA) ಪ್ರಕಾರ, ಇತರ ಭಯೋತ್ಪಾದಕ ಚಟುವಟಿಕೆಗಳ ಜೊತೆಗೆ 2021 ರಲ್ಲಿ ಮೊಹಾಲಿಯಲ್ಲಿರುವ ಪಂಜಾಬ್ ಪೊಲೀಸ್ ಗುಪ್ತಚರ ಪ್ರಧಾನ ಕಚೇರಿಯ ಮೇಲೆ ರಾಕೆಟ್ ದಾಳಿಯಲ್ಲಿ ಲಾಂಡಾ ಭಾಗಿಯಾಗಿದ್ದ.
1989 ರಲ್ಲಿ ಪಂಜಾಬ್‌ನ ತರ್ನ್ ತರನ್ ಜಿಲ್ಲೆಯಲ್ಲಿ ಜನಿಸಿದ ಲಾಂಡಾ 2017 ರಲ್ಲಿ ಕೆನಡಾಕ್ಕೆ ಪರಾರಿಯಾಗಿದ್ದ. ಕೇಂದ್ರ ಗೃಹ ಸಚಿವಾಲಯ(MHA) ಆತನನ್ನು ಕುಖ್ಯಾತ ಖಲಿಸ್ತಾನಿ ಗುಂಪಿನ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ (BKI) ಸದಸ್ಯ ಎಂದು ಗುರುತಿಸುತ್ತದೆ. ಲಾಂಡಾ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ (BKI)ನೊಂದಿಗೆ ಸಹಕರಿಸಿದ ಪಾಕಿಸ್ತಾನ ಮೂಲದ ಗ್ಯಾಂಗ್‌ಸ್ಟರ್‌ ರಿಂಡಾ ಎಂದೂ ಕರೆಯಲ್ಪಡುವ ಹರ್ವಿಂದರ್ ಸಿಂಗ್ ಎಂಬಾತನೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾನೆ ಎಂದು ನಂಬಲಾಗಿದೆ.
ಭಾರತದ ವಿರುದ್ಧ ಷಡ್ಯಂತ್ರಗಳನ್ನು ರೂಪಿಸುವಲ್ಲಿ ತೊಡಗಿಕೊಂಡಿದ್ದ. ಈ ವರ್ಷದ ಸೆಪ್ಟೆಂಬರ್‌ನಲ್ಲಿ, ಕೆನಡಾ ಮೂಲದ ಭಯೋತ್ಪಾದಕನ ನಿಕಟ ಸಹಚರರೊಂದಿಗೆ ಸಂಪರ್ಕ ಹೊಂದಿದ 48 ಸ್ಥಳಗಳಲ್ಲಿ ಪಂಜಾಬ್ ಪೊಲೀಸರು ದಾಳಿ ನಡೆಸಿದ್ದರು.

ಪ್ರಮುಖ ಸುದ್ದಿ :-   ಉದ್ಯಮಿ, ಬಿಜೆಪಿ ನಾಯಕ ಗೋಪಾಲ ಖೇಮ್ಕಾ ಹತ್ಯೆ ಪ್ರಕರಣ ; ಅವರ ಅಂತ್ಯಕ್ರಿಯೆಗೆ ಹಾರ ಹಿಡಿದುಕೊಂಡು ಬಂದ ಆರೋಪಿ...!

ಸೆಪ್ಟೆಂಬರ್ 21 ರಂದು ವ್ಯಾಪಾರಿಯೊಬ್ಬರ ಮೇಲೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ತನಗೆ ಯಾರೋ ಲಾಂಡ ಎಂದು ಕರೆ ಮಾಡಿ 15 ಲಕ್ಷ ರೂ.ಬೇಡಿಕೆ ಇಟ್ಟಿದ್ದ ಎಂದು ವ್ಯಾಪಾರಿ ತಿಳಿಸಿದ್ದರು.
ಗೃಹ ಸಚಿವಾಲಯದ ಪ್ರಕಾರ, ಪಂಜಾಬ್ ಮೊಹಾಲಿಯಲ್ಲಿ ನಡೆದ ರಾಕೆಟ್ ದಾಳಿಗೆ ಲಾಂಡಾ ಹೊಣೆಗಾರನಾಗಿದ್ದ, ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿರುವ ವಿವಿಧ ಘಟಕಗಳಿಗೆ ಸುಧಾರಿತ ಸ್ಫೋಟಕ ಸಾಧನಗಳು (ಐಇಡಿಗಳು), ಶಸ್ತ್ರಾಸ್ತ್ರಗಳು, ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳ ಪೂರೈಕೆಯಲ್ಲಿ ತೊಡಗಿಸಿಕೊಂಡಿದೆ.
ಭಯೋತ್ಪಾದನಾ ಘಟಕಗಳ ರಚನೆ, ಸುಲಿಗೆ, ಹತ್ಯೆಗಳು, ಐಇಡಿಗಳನ್ನು ಇಡುವುದು, ಶಸ್ತ್ರಾಸ್ತ್ರಗಳು ಮತ್ತು ಮಾದಕವಸ್ತುಗಳ ಕಳ್ಳಸಾಗಣೆ ಮತ್ತು ಪಂಜಾಬ್‌ನಲ್ಲಿ ಮಾತ್ರವಲ್ಲದೆ ದೇಶದ ಇತರ ಭಾಗಗಳಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಹಣವನ್ನು ಬಳಸುವುದಕ್ಕೆ ಸಂಬಂಧಿಸಿದ ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಲಾಂಡಾ ಭಾಗಿಯಾಗಿದ್ದಾನೆ ಎಂದು ಗೃಹ ಸಚಿವಾಲಯ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.
ಲಾಂಡಾ ಕೆನಡಾ ಮೂಲದ ಹಲವಾರು ಖಲಿಸ್ತಾನಿ ಭಯೋತ್ಪಾದಕರೊಂದಿಗೆ ನಿಕಟ ಸಂಬಂಧ ಹೊಂದಿದ್ದ, ಇದರಲ್ಲಿ ಸಿಖ್ಸ್ ಫಾರ್ ಜಸ್ಟಿಸ್‌ನ ಗುರುಪತ್‌ವಂತ್ ಸಿಂಗ್ ಪನ್ನುನ್ ಮತ್ತು ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ಸಹ ಸೇರಿದೆ.

ಪ್ರಮುಖ ಸುದ್ದಿ :-   ಜಗತ್ತಿನ ಅತ್ಯಂತ ಅಮೂಲ್ಯವಾದ ಕಣ್ಣೀರು ; ಒಂಟೆಯ ಕಣ್ಣೀರಿನ ಹನಿ 26 ಜಾತಿ ವಿಷದ ಹಾವುಗಳ ಕಡಿತಕ್ಕೆ ದಿವ್ಯ ಔಷಧ : ಹೊಸ ಅಧ್ಯಯನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement