
ಹುಬ್ಬಳ್ಳಿ:ಕಣ್ಣೂರುನಿಂದ ಆಗಮಿಸಿದ್ದ ಇಂಡಿಗೋ ವಿಮಾನ, ಇಲ್ಲಿನ ವಿಮಾನ ನಿಲ್ದಾಣದಲ್ಲಿ ಹಾರ್ಡ್ ಲ್ಯಾಂಡಿಂಗ್ ಆಗಿದೆ.
ಸೋಮವಾರ ರಾತ್ರಿ 8:30ರ ಸುಮಾರಿಗೆ ನಡೆದಿದೆ, ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿಲ್ಲ.
ಪ್ರಯಾಣಿಕರನ್ನು ಹೊತ್ತುಕೊಂಡು ಬಂದಿದ್ದ ವಿಮಾನವನ್ನು, ಪೈಲಟ್ ಮೊದಲು ರನ್ ವೇ ದಲ್ಲಿ ಇಳಿಸಲು ಪ್ರಯತ್ನಿಸಿದ್ದಾನೆ. ಅದು ಆಗಿದಿದ್ದಾಗ ಎರಡನೇ ಬಾರಿ ಇಳಿಸಲು ಯತ್ನಿಸಿದಾಗ ಹಾರ್ಡ್ ಲ್ಯಾಂಡಿಂಗ್ ಆಗಿ ಟೈರ್ ಬರ್ಸ್ಟ್ ಆಗಿದೆ ಎಂದು ಹೇಳಲಾಗುತ್ತಿದೆ.
ಕಣ್ಣೂರಿನಿಂದ ಆಗಮಿಸಿದ್ದ ವಿಮಾನ ನಂತರ ಬೆಂಗಳೂರಿಗೆ ಪ್ರಯಾಣ ಬೆಳೆಸಬೇಕಿತ್ತು. ಸುಮಾರು 20 ಪ್ರಯಾಣಿಕರು ಬೆಂಗಳೂರಿಗೆ ಪ್ರಯಾಣಿಸುವವರಿದ್ದರು. ಆದರೆ ಬೆಂಗಳೂರು ಪ್ರಯಾಣವನ್ನು ರದ್ದುಪಡಿಸಲಾಗಿದೆ. ವಿಮಾನದಲ್ಲಿದ್ದ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.



ನಿಮ್ಮ ಕಾಮೆಂಟ್ ಬರೆಯಿರಿ