ವಿಧಾನಸಭೆ ಚುನಾವಣೆ ಫಲಿತಾಂಶ: ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್‌-8, ಜೆಡಿಎಸ್‌-2, ಬಿಜೆಪಿ-1ರಲ್ಲಿ ಗೆಲುವು

ಮೈಸೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. 2 ಕ್ಷೇತ್ರಗಳಲ್ಲಿ ಜೆಡಿಎಸ್‌ ಹಾಗೂ 1 ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಜಯಭೇರಿ ಬಾರಿಸಿದೆ.
ಜಿಲ್ಲೆಯ ಚಾಮರಾಜ, ಕೆ.ಆರ್ ನಗರ, ಟಿ.ನರಸೀಪುರ, ನರಸಿಂಹರಾಜ, ನಂಜನಗೂಡು, ಪಿರಿಯಾಪಟ್ಟಣ, ಎಚ್.ಡಿ‌ ಕೋಟೆ, ವರುಣ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದೆ. ಚಾಮುಂಡೇಶ್ವರಿ, ಹುಣಸೂರು ಕ್ಷೇತ್ರಗಳಲ್ಲಿ ಜೆಡಿಎಸ್‌ ಗೆದ್ದಿದೆ, ಕೃಷ್ಣರಾಜ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಗೆಲುವು ಕಂಡಿದೆ.
ಚಾಮರಾಜ ಕ್ಷೇತ್ರದಲ್ಲಿ ಕಾಂಗೆಸ್‌ನ ಹರೀಶ್ ಗೌಡ ಅವರು 72,931 ಮತಗಳನ್ನು ಪಡೆದು ಗೆಲವು ಸಾಧಿಸಿದ್ದಾರೆ. ನರಸಿಂಹರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ತನ್ವೀರ್ ಸೇಠ್ ಅವರು 71,862 ಮತಗಳನ್ನು ಪಡೆದು ಗೆದ್ದಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಜಿ.ಟಿ ದೇವೇಗೌಡ, ಅವರು 1,34,035 ಮತಗಳನ್ನು ಪಡೆದು ಗೆಲವು ಸಾಧಿಸಿದ್ದಾರೆ. ಪಿರಿಯಾಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೆ.ವೆಂಕಟೇಶ್ ಅವರು 85,289 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ. ಟಿ.ನರಸೀಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಾ.ಎಚ್.ಸಿ ಮಹದೇವಪ್ಪ ಅವರು 77,884 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಂಜನಗೂಡು ಕ್ಷೇತ್ರದಲ್ಲಿ ದರ್ಶನ್ ಧ್ರುವನಾರಾಯಣ ಜಯಗಳಿಸಿದ್ದಾರೆ. ಎಚ್.ಡಿ‌ ಕೋಟೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನಿಲ್ ಚಿಕ್ಕಮಾದು ಅವರು 84,359 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಕೆ.ಆರ್ ನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ರವಿ ಶಂಕರ ಅವರು 97,704 ಮತಗಳನ್ನು ಪಡೆದು ಜಯಗಳಿಸಿದರೆ ವರುಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿದ್ದರಾಮಯ್ಯ ಅವರು 1,16,856 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಹುಣಸೂರು ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಜಿ.ಡಿ ಹರೀಶ್ ಗೌಡ ಅವರು 94,666 ಮತಗಳನ್ನು ಪಡೆದು ಜಯಗಳಿಸಿದರೆ ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಅವರು 73,670 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement