ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್ ಮೇಕರ್ ಅಳವಡಿಕೆ

ಬೆಂಗಳೂರು: ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದ ಕುರಿತು ಅವರ ಪುತ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದು ಒಂದು ಸಣ್ಣ ಶಸ್ತ್ರಚಿಕಿತ್ಸೆಯಾಗಿತ್ತು. ಶಸ್ತ್ರಚಿಕಿತ್ಸೆಯ ನಂತರ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಸ್ಥಿರವಾಗಿದೆ. ಅಕ್ಟೋಬರ್ 3 ರಿಂದ ತಮ್ಮ ಕೆಲಸವನ್ನು ಅವರು ಪುನರಾರಂಭಿಸುವ ನಿರೀಕ್ಷೆಯಿದೆ. ಎಲ್ಲರ ಕಾಳಜಿ, ಬೆಂಬಲ ಮತ್ತು ಪ್ರೀತಿಗೆ ನಮ್ಮ ಕೃತಜ್ಞತೆಗಳು ಎಂದು ಹೇಳಿದ್ದಾರೆ.

ವಯೋಸಹಜ ಸಮಸ್ಯೆಯಿಂದ ಹಾಗೂ ಉಸಿರಾಟದ ತೊಂದರೆಯಿಂದಾಗಿ ಖರ್ಗೆ ಅವರಿಗೆ ಫೇಸ್ ಮೇಕರ್ ಅವಡಿಸಲು ವೈದ್ಯರು ಸಲಹೆ ನೀಡಿದ್ದರು. ಹೃದಯ ಬಡಿತದ ಸ್ಥಿರತೆಗಾಗಿ ಇದು ಅಶ್ಯ ಎಂದು ವೈದ್ಯರು ತಿಳಿಸಿದ್ದ ಹಿನ್ನೆಲೆಯಲ್ಲಿ ಇದನ್ನು ಅಳವಡಿಸಲಾಗಿದೆ, ಇದರ ಹೊರತಾಗಿ ಅವರಿಗೆ ಬೇರೆ ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿದ್ದಾರೆ.
ಎರಡ್ಮೂರು ದಿನಗಳ ಸಂಪೂರ್ಣ ವಿಶ್ರಾಂತಿ ಅಗತ್ಯ ಎಂದು ವೈದ್ಯರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಅವರು ವಿಶ್ರಾಂತಿಯಲ್ಲಿದ್ದಾರೆ. ಯಾರೂ ಗಾಬರಿ ಪಡುವ ಅವಶ್ಯಕತೆಯಿಲ್ಲ, ಪ್ರತಿಯೊಬ್ಬರ ಹಾರೈಕೆಯಿಂದ ಖರ್ಗೆ ಅವರಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಗುರುವಾರ ಪ್ರಧಾನಿ ಮೋದಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement