ಕರ್ನಾಟಕದಲ್ಲಿ ಸೆಪ್ಟೆಂಬರ್ 15ರ ವರೆಗೂ ಮಳೆ ಜೋರು: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 15ರ ವರೆಗೂ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಖ್ಯವಾಗಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಹೆಚ್ಚು ಮಳೆಯಾಗಲಿದ್ದು,ಈ ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಹಲವೆಡೆ ಸೆಪ್ಟೆಂಬರ್ 15ರ ವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರ್ಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕಳದೆ ಎರಡು ದಿನಗಳಿಂದಲೂ ಮಳೆಯಾಗುತ್ತಿದೆ ಎಂದೂ ಇಲಾಖೆ ವರದಿ ಹೇಳಿದೆ.
ಕರಾವಳಿ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇತ್ತ ಮಲೆನಾಡು ಜಿಲ್ಲೆಗಳು ಹಾಗೂ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement