ಶಿವಮೊಗ್ಗ: ಹಿಂದೂ ಸಂಘಟನೆ ಕಾರ್ಯಕರ್ತನ ಭೀಕರ ಹತ್ಯೆ, ಪರಿಸ್ಥಿತಿ ಉದ್ವಿಗ್ನ

ಶಿವಮೊಗ್ಗ: ನಗರದ ಸೀಗೆಹಟ್ಟಿಯಲ್ಲಿ ಹಿಂದೂ ಪರ ಸಂಘಟನೆಯ ಯುವಕನೊಬ್ಬನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾದ ಘಟನೆ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದ ಬಗ್ಗೆ ವರದಿಯಾಗಿದೆ.
ಮೃತನನ್ನು ಹರ್ಷ (25) ಎಂದು ಗುರುತಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ರಾತ್ರಿ 10ರ ಸುಮಾರಿಗೆ ಭಾರತಿ ಕಾಲೋನಿ ಬಳಿ ಚಹಾ ಕುಡಿಯುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ. ಗಾಯಗೊಂಡ ಹರ್ಷ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾರೂ ಪ್ರಯೋಜನವಾಗಲಿಲ್ಲ.

ಸಿಗೇಹಟ್ಟಿ ಬಡಾವಣೆ ನಿವಾಸಿಯಾಗಿದ್ದ ಹರ್ಷ, ಐದು ವರ್ಷಗಳಿಂದ ಭಜರಂಗದಳದ ಸಕ್ರಿಯ ಕಾರ್ಯಕರ್ತನಾಗಿದ್ದು, ಈ ಹಿಂದೆ ಎರಡು ಬಾರಿ ಇವರ ಮೇಲೆ ದಾಳಿ ನಡೆದಿತ್ತು.. ಭಾನುವಾರ ರಾತ್ರಿ ನೋಡ ನೋಡ್ತಿದ್ದಂತೆ ಮಾರಕಾಸ್ತ್ರ ಬೀಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಅಕ್ಕಪಕ್ಕದ ಬಡಾವಣೆ ನಿವಾಸಿಗಳು ಜಮಾಯಿಸಿದ್ದಾರೆ. ಕಲ್ಲು ತೂರಾಟ ನಡೆದು, ನಂತರ ಪೊಲೀಸರು ಲಾಠಿಚಾರ್ಜ್ ಮಾಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಇಂದು ಶಿವಮೊಗ್ಗ ನಗರದ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಆದೇಶಿಸಿದ್ದಾರೆ. ಇದೇ ವೇಳೆ, ಮಾತಾಡಿದ ಡಿಸಿ, ಆರೋಪಿಗಳನ್ನು ಕೂಡಲೇ ಬಂಧಿಸಲಾಗುವುದು. ಶಾಂತಿ ಸುವ್ಯವಸ್ಥೆಗೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಯಾರೂ ತಾಳ್ಮೆ ಕಳೆದುಕೊಳ್ಳಬೇಡಿ ಅಂತಾ ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ; ಸಿಎಂ ಡಿಕೆ ಶಿವಕುಮಾರ ಘೋಷಣೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement