ರಾಜ್ಯದಲ್ಲಿ ಬರ ಪರಿಸ್ಥಿತಿ : ನಾಳೆಯಿಂದ ಕೇಂದ್ರ ತಂಡದಿಂದ 12 ಜಿಲ್ಲೆಗಳಲ್ಲಿ ಪರಿಶೀಲನೆ

ಬೆಂಗಳೂರು : ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಬರ ಸಮೀಕ್ಷೆಗಾಗಿ ನಾಳೆ, ಗುರುವಾರ ರಾಜ್ಯಕ್ಕೆ ಕೇಂದ್ರ ಸರ್ಕಾರದ ಮೂರು ತಂಡ ಭೇಟಿ ನೀಡಿ ಬರದ ಸ್ಥಿತಿಯ ಕುರಿತು ಪರಿಶೀಲನೆ ನಡೆಸಲಿದೆ.
ನಾಳೆಯಿಂದ ಅಕ್ಟೋಬರ್ 9ರ ವರೆಗೆ ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ದಾವಣಗೆರೆ ಸೇರಿ ಒಟ್ಟು 12 ಜಿಲ್ಲೆಗಳಿಗೆ ಕೇಂದ್ರದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಪ್ರವಾಸಕ್ಕೂ ಮುನ್ನ ಕೇಂದ್ರ ತಂಡದ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿ ಚರ್ಚಿಸಲಿದ್ದಾರೆ.
ರಾಜ್ಯದಲ್ಲಿ ಮಳೆ ಕೊರತೆತಯಾಗಿ ಬರ ಪರಿಸ್ಥಿತಿ ಎದುರಾಗಿದ್ದು ರಾಜ್ಯ ಸರ್ಕಾರ ಈಗಾಗಲೇ 195 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಿದೆ. ಅದರಲ್ಲಿ 161 ತಾಲೂಕುಗಳಲ್ಲಿ ತೀವ್ರವಾದ ಬರ ಪರಿಸ್ಥಿತಿ ಇದೆ ಹಾಗೂ 34 ತಾಲೂಕುಗಳಲ್ಲಿ ಸಾಧಾರಣ ಬರದ ಪರಿಸ್ಥಿತಿ ಎಂದು ಘೋಷಣೆ ಮಾಡಿದೆ. ಮೂರು ಉಪತಂಡಗಳನ್ನು ಒಳಗೊಂಡ ಕೇಂದ್ರ ಅಧ್ಯಯನ ತಂಡವು ರಾಜ್ಯದಲ್ಲಿನ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನೆಲದ ಪರಿಸ್ಥಿತಿಯನ್ನು ನಿರ್ಣಯಿಸಿ ಅದರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿದೆ.

ಪ್ರಮುಖ ಸುದ್ದಿ :-   ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ತಲೆದಂಡ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement