ಅಯೋಧ್ಯಾ ರಾಮ ಮಂದಿರ : ಜನವರಿ 22 ರಂದು ‘ಪ್ರಾಣ ಪ್ರತಿಷ್ಠೆ’ ಕಾರ್ಯಕ್ರಮಕ್ಕೆ ತಡೆ ಕೋರಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ

ಪ್ರಯಾಗರಾಜ್‌ : ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಿಷೇಧಿಸುವಂತೆ ಕೋರಿ ಅಲಾಹಾಬಾದ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್ ನಿವಾಸಿ ಭೋಲಾ ದಾಸ್ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ.
2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಹಿಂದೂ ಪಂಚಾಂಗದ ಪ್ರಕಾರ, ಪುಷ್ಯ ಮಾಸದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮ ಆಯೋಜಿಸಬಾರದು. ಅಲ್ಲದೆ ದೇವಾಲಯ ಇನ್ನೂ ನಿರ್ಮಾಣ ಹಂತದಲ್ಲಿದ್ದು ಉದ್ಘಾಟನೆ ಸನಾತನ ಸಂಪ್ರದಾಯಕ್ಕೆ ವ್ಯತಿರಿಕ್ತವಾಗಿದ್ದು, ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಶಂಕರಾಚಾರ್ಯರ ಆಕ್ಷೇಪವಿದೆ. ದೇವಾಲಯ ಅಪೂರ್ಣವಾಗಿದ್ದು ದೇವರ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮಾಡುವುದು ಸನಾತನ ಧರ್ಮದ ಆಚರಣೆಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ. ಇದಲ್ಲದೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಲಾಭಕ್ಕಾಗಿ ಬಿಜೆಪಿ ಈ ಸಮಾರಂಭ ಹಮ್ಮಿಕೊಂಡಿದೆ ಎಂದು ಅರ್ಜಿ ಆರೋಪಿಸಿದೆ.
2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ | ಜನವರಿಯಲ್ಲಿ ಉದ್ಘಾಟನೆಯಾದ ನಂತರ ಅಯೋಧ್ಯೆ ರಾಮಮಂದಿರದಲ್ಲಿ ಇದೇ ಮೊದಲ ಬಾರಿಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement