ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಬಿಎಸ್‌ವೈ

ಶಿಕಾರಿಪುರ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ನಾಯಕತ್ವ ಬದಲಾವಣೆ ಕುರಿತು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಂತೋಷ್ ಹೇಳಿಕೆ ಬಗ್ಗೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಹಾಗಾಗಿ ನಾಯಕತ್ವ ಬದಲಾವಣೆ ಪ್ರಶ್ನೆ ಉದ್ಭವಿಸುವುದಿಲ್ಲ. ನನ್ನ ಪ್ರಕಾರ ಅಂತಹ ಯಾವುದೇ ನಿರ್ಧಾರಗಳು ಸದ್ಯಕ್ಕಿಲ್ಲ. ಬಿ.ಎಲ್‌. ಸಂತೋಷ ಅವರ ಹೇಳಿಕೆ ಬಗ್ಗೆ ನಾನು ಯಾವುದೇ ಚರ್ಚೆ ಮಾಡುವುದಿಲ್ಲ. ಆ ವಿಚಾರವನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ತಿಳಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತಾ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರನ್ನು ಭೇಟಿ ಮಾಡುತ್ತೇನೆ. ಇದು ಚುನಾವಣಾ ವರ್ಷವಾಗಿರುವುದರಿಂದ ರಾಜ್ಯದಲ್ಲಿ ಬಿಜೆಪಿ ಪಕ್ಷ ಸಂಘಟನೆ ಮತ್ತು ಮರಳಿ ಅಧಿಕಾರ ಪಡೆಯಲು ಬೇಕಾದ ಕಾರ್ಯತಂತ್ರಗಳ ಕುರಿತು ಚರ್ಚಿಸಲು ರಾಷ್ಟ್ರೀಯ ಅಧ್ಯಕ್ಷರು, ಗೃಹಸಚಿವರು ಆಗಾಗ್ಗೆ ರಾಜ್ಯ ಪ್ರವಾಸ ಕೈಗೊಳ್ಳುತ್ತಿರುತ್ತಾರೆ. ಪ್ರತಿ ಬೂತ್ ಮಟ್ಟದಲ್ಲಿಯೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಯುವ ನಿಟ್ಟಿನಲ್ಲಿಯೂ ಕಾರ್ಯ ಯೋಜಿಸಲಾಗಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement