ವಿವಾದಾತ್ಮಕ ಹೇಳಿಕೆ ; ನವಜೋತ್ ಕೌರ್ ಸಿಧು ಕಾಂಗ್ರೆಸ್‌ ನಿಂದ ಅಮಾನತು

ನವದೆಹಲಿ: ವಿವಾದಾತ್ಮಕ ಹೇಳಿಕೆ ನೀಡಿದ ನಂತರ ನವಜೋತ್ ಕೌರ್ ಸಿಧು ಅವರನ್ನು ಕಾಂಗ್ರೆಸ್ ಪಕ್ಷದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.
“ಡಾ. ನವಜೋತ್ ಕೌರ್ ಸಿಧು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ” ಎಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಆದೇಶದಲ್ಲಿ ತಿಳಿಸಿದ್ದಾರೆ.
ಯಾರು ₹500 ಕೋಟಿ ಮೌಲ್ಯದ ಸೂಟ್‌ಕೇಸ್ ನೀಡುತ್ತಾರೋ, ಅವರು ಪಂಜಾಬ್‌ನಲ್ಲಿ ಮುಖ್ಯಮಂತ್ರಿ ಆಗುತ್ತಾರೆ” ಎಂದು ಸಿಧು ವಿವಾದಾತ್ಮಕ ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಈ ಕ್ರಮ ಬಂದಿದೆ. ಅವರು ಕಾಂಗ್ರೆಸ್ ನಾಯಕತ್ವದ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು ಸಹ ಮಾಡಿದ್ದರು.
ಲೂ ಪಂಜಾಬ್ ಮತ್ತು ಪಂಜಾಬಿಯತ್ ಪರವಾಗಿ ಮಾತನಾಡುತ್ತೇವೆ… ಆದರೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಲು ನಾವು ನೀಡಬಹುದಾದ 500 ಕೋಟಿ ರೂ. ನಮ್ಮಲ್ಲಿ ಇಲ್ಲ” ಎಂದು ಪಂಜಾಬ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಪತ್ನಿ ಕೌರ್ ಶನಿವಾರ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ಭೇಟಿಯಾದ ನಂತರ ಸುದ್ದಿಗಾರರಿಗೆ ತಿಳಿಸಿದ್ದರು.

ವಿವಾದದ ನಂತರ ನವಜೋತ್ ಕೌರ್ ಸ್ಪಷ್ಟನೆ
ಆದಾಗ್ಯೂ, ಅವರ ಹೇಳಿಕೆಯ ನಂತರ ರಾಜಕೀಯ ವಿವಾದ ಭುಗಿಲೆದ್ದಿದ್ದರಿಂದ, ನವಜೋತ್ ಕೌರ್ ಅವರು ತಮ್ಮ ನೇರ ಹೇಳಿಕೆಯನ್ನು ತಿರುಚಲಾಗಿದೆ ಎಂದು ಪ್ರತಿಪಾದಿಸಿದರು. “ಕಾಂಗ್ರೆಸ್ ನಮ್ಮಿಂದ ಎಂದಿಗೂ ಏನನ್ನೂ ಕೇಳಿಲ್ಲ ಎಂದು ಹೇಳುವ ನೇರ ಹೇಳಿಕೆಗೆ ಟ್ವಿಸ್ಟ್‌ ನೀಡಿರುವುದನ್ನು ನೋಡಿ ನನಗೆ ಆಘಾತವಾಗಿದೆ. ನವಜೋತ್ ಸಿಂಗ್ ಸಿಧು ಅವರು ಬೇರೆ ಯಾವುದೇ ಪಕ್ಷದಿಂದ ಮುಖ್ಯಮಂತ್ರಿ ಹುದ್ದೆಯ ಅಭ್ಯರ್ಥಿ ಮುಖದ ಬಗ್ಗೆ ಕೇಳಿದಾಗ, ಮುಖ್ಯಮಂತ್ರಿ ಹುದ್ದೆಗೆ ಆಫರ್ ಮಾಡಲು ನಮ್ಮ ಬಳಿ ಹಣವಿಲ್ಲ ಎಂದು ನಾನು ಹೇಳಿದೆ” ಎಂದು ಕೌರ್ ಅವರು ಭಾನುವಾರ ಸಂಜೆ X ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಅವರ ಹೇಳಿಕೆಯ ನಂತರ, ಬಿಜೆಪಿ ಮತ್ತು ಎಎಪಿ ಪಕ್ಷಗಳು, ಅವರ ಹೇಳಿಕೆಗಳು ಕಾಂಗ್ರೆಸ್‌ ಪಕ್ಷವು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಅದು ನಡೆಸುವ ‘ಹಣದ ಚೀಲದ ರಾಜಕೀಯ’ದ “ಅಸಹ್ಯಕರ ಸತ್ಯವನ್ನು” ಬಯಲು ಮಾಡಿವೆ ಎಂದು ಪ್ರತಿಪಾದಿಸಿವೆ.

ಪ್ರಮುಖ ಸುದ್ದಿ :-   ತೃಣಮೂಲ ಬಂಡಾಯ ಸಂಸದರನ್ನು ಯಾಕೆ ಆಹ್ವಾನಿಸಿದ್ದೀರಿ ? : ಸರ್ವಪಕ್ಷ ಸಭೆಗೆ ಕೆಲಕಾಲ ಬಹಿಷ್ಕರಿಸಿದ ವಿಪಕ್ಷಗಳು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement