ಯಾದಗಿರಿ : ನಾಳೆ (ಮಂಗಳವಾರ) ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪೂರ (ಬಸವಸಾಗರ) ಜಲಾಶಯಕ್ಕೆ ಕೇಂದ್ರ ನೀರಾವರಿ ಸಚಿವ ಗಜೇಂದ್ರಸಿಂಗ್ ಶೆಖಾವತ್ ಭೇಟಿ ನೀಡಲಿದ್ದಾರೆ. ಎಂದು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನಿಂದ ಬೆಳಿಗ್ಗೆ ನಾರಾಯಣಪುರಕ್ಕೆ ಆಗಮಿಸಲಿರುವ ಸಚಿವರು, ಬಸವಸಾಗರ ಜಲಾಶಯ ವೀಕ್ಷಣೆ ಮತ್ತು ಸ್ಯಾಡಾ ಫೇಸ್ 10 ಅಡಿಯಲ್ಲಿ ನಿರ್ಮಿಸಲಾಗಿರುವ ಸ್ವಯಂಚಾಲಿತ ಗೇಟುಗಳ ನಿರ್ವಹಣೆಯನ್ನು ಪರಿಶೀಲಿಸಲಿದ್ದಾರೆ. ನಂತರ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.
ಕೇಂದ್ರ ಸಚಿವರು ಗೇಟ್ ಸ್ಥಳಕ್ಕೂ ಭೇಟಿ ನೀಡಲಿದ್ದು, ಜಲಾಶಯದ ವಾಸ್ತವ ಪರಿಸ್ಥಿಯನ್ನು ಅರಿಯಲಿದ್ದಾರೆ. ಅವರ ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳು ಸಕಲ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಸ್ಥಳಕ್ಕೆ ಸಹಾಯುಕ ಸಹಾಯುಕ್ತ ಪ್ರಶಾಂತ ಅನಗುಂಡಿ ಹಾಗೂ ಹುಣಸಗಿ ತಹಶೀಲ್ದಾರ ಮಹಾದೇವಪ್ಪಗೌಡ ಬಿರಾದರ ನಾರಾಯಣಪೂರಕ್ಕೆ ಭೇಟಿ ನೀಡಿ ಹೆಲಿಪ್ಯಾಡ್ ಸೇರಿದಂತೆ ವಿವಿಧ ಸಿದ್ದತೆ ಕಾರ್ಯಗಳನ್ನು ಪರಿಶೀಲಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ