ಕರ್ನಾಟಕದಲ್ಲಿ 14 ಸಾವಿರಕ್ಕೆ ಇಳಿದ ದೈನಂದಿನ ಕೊರೊನಾ ಪ್ರಕರಣ, ಸಾವಿನ ಸಂಖ್ಯೆ ಇಳಿಕೆಯಿಲ್ಲ

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು ಮಂಗಳವಾರ ( ಕಳೆದ 24 ಗಂಟೆಯಲ್ಲಿ) 14,304 ಹೊಸ ಕೊರೊನಾ ಸೋಂಕು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 26,18,735ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 464 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 29,554ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಮಂಗಳವಾರ 3,734 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,66,647ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ 276 ಮಂದಿ ನಿಧನರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮಂಗಳವಾರ ಸಹ ಹೊಸ ಸೋಂಕಿಗಿಂತ ಗುಣಮುಖರಾದವರ ಸಂಕ್ಯೆ ದುಪ್ಪಟ್ಟು ಇದ್ದು 29,271 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 22,90,861ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ 2,98,299 ಸಕ್ರಿಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಮಂಗಳವಾರ 1,16,224 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 14,304 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 12.30ಕ್ಕೆ ಇಳಿದಿದೆ.
ಜಿಲ್ಲಾವಾರು ಮಾಹಿತಿ ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಗೋಕರ್ಣ ಕಡಲ ತೀರದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

18-05-2021 HMB Kannada

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement