ಕರ್ನಾಟಕದಲ್ಲಿ ವಾರಕ್ಕೆ ಒಂದು ದಿನ ‘ಲಸಿಕಾ ಉತ್ಸವ’

ಚಿಕ್ಕಬಳ್ಳಾಪುರ: ಕೋವಿಡ್ ಲಸಿಕೆಯನ್ನು ತ್ವರಿತವಾಗಿ ನೀಡುವ ಉದ್ದೇಶದಿಂದ ವಾರದಲ್ಲಿ ಒಂದು ದಿನ ಲಸಿಕಾ ಉತ್ಸವ ಹಮ್ಮಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ನಾಡಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಸಿಕಾ ಉತ್ಸವದಂದು 15ರಿಂದ 20 ಲಕ್ಷ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಪ್ರತಿದಿನ ಐದು ಲಕ್ಷ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ. ಆ ಮೂಲಕ ತಿಂಗಳಿಗೆ ಒಂದೂವರೆ ಕೋಟಿ ಕೋವಿಡ್ ಲಸಿಕೆ ನೀಡುವ ಉದ್ದೇಶವಿದೆ ಎಂದರು.
ಬೆಂಗಳೂರಿನ ಕೊಳಗೇರಿ ನಿವಾಸಿಗಳು, ಗುಡಿಸಲಿನಲ್ಲಿ ಇರುವವರಿಗೆ ಆಂದೋಲನ ರೀತಿಯಲ್ಲಿ ಲಸಿಕೆ ನೀಡಲಾಗುವುದು. ಈಗಾಗಲೇ ಬೆಂಗಳೂರಿನಲ್ಲಿ ಒಂದು ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಇನ್ನೆರಡು ತಿಂಗಳಲ್ಲಿ ಬೆಂಗಳೂರು ಎರಡು ಡೋಸ್ ಲಸಿಕೆ ಪಡೆದ ಮೊದಲ ಮಹಾನಗರವಾಗಲಿದೆ ಎಂದು ಹೇಳಿದರು. ಬೆಂಗಳೂರಿಗೆ ವಿದೇಶ ಹಾಗೂ ಹೊರರಾಜ್ಯದವರು ಹೆಚ್ಚಾಗಿ ಬರುವುದರಿಂದ ಆದ್ಯತೆ ಮೇರೆಗೆ ಎಲ್ಲರಿಗೂ ಲಸಿಕೆ ನೀಡಲು ಸೂಚನೆ ನೀಡಲಾಗಿದೆ ಎಂದರು.
ಎತ್ತಿನಹೊಳೆ ಯೋಜನೆ ಬಗ್ಗೆ ಸರ್ಕಾರದ ಸ್ಪಷ್ಟ ಚಿತ್ರಣ ಕೆಲವೇ ದಿನಗಳಲ್ಲಿ ಗೋಚರವಾಗಲಿದೆ. ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀರಾವರಿ ವಿಚಾರದಲ್ಲಿ ಆಳವಾದ ಜ್ಞಾನ ಹೊಂದಿದ್ದಾರೆ. ಅವರು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಎಚ್.ಡಿ ರೇವಣ್ಣ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement