ಹಿಜಾಬ್ ನಿಷೇಧ ವಿವಾದ: ವಿಚಾರಣೆಗೆ ತ್ರಿಸದಸ್ಯ ಪೀಠ ರಚಿಸಲು ಸುಪ್ರೀಂ ಕೋರ್ಟ್ ಪರಿಗಣನೆ

ನವದೆಹಲಿ: ಹಿಜಾಬ್ ಕುರಿತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ರಚನೆ ಮಾಡುವುದನ್ನು ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಈ ಬಗ್ಗೆ ಕೋರ್ಟ್ ರಿಜಿಸ್ಟ್ರಾರ್ ಮುಂದೆ ವಿಷಯ ಪ್ರಸ್ತಾಪಿಸಲು ಉಭಯ ವಕೀಲರಿಗೆ ಸೂಚಿಸಿದೆ.
ಫೆಬ್ರವರಿ 6 ರಿಂದ ರಾಜ್ಯದಲ್ಲಿ ಕೆಲವು ತರಗತಿಗಳಿಗೆ ನಿಗದಿಯಾಗಿರುವ ಪ್ರಾಯೋಗಿಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಮಧ್ಯಂತರ ಆದೇಶದ ಅಗತ್ಯವಿದೆ ಎಂದು ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಅವರ ಸಲ್ಲಿಕೆಗಳನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ವಿ.ರಾಮಸುಬ್ರಮಣಿಯನ್ ಮತ್ತು ಜೆಬಿ ಪಾರ್ದಿವಾಲಾ ಅವರನ್ನೊಳಗೊಂಡ ಪೀಠ ಗಮನಿಸಿತು.
ಕಳೆದ ವರ್ಷ ಹಿಜಾಬ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‍ನ ದ್ವಿಸದಸ್ಯ ಪೀಠ ಭಿನ್ನಮತದ ತೀರ್ಪು ನೀಡಿತ್ತು. ಇದೀಗ ಸಾಂವಿಧಾನಿಕ ಪೀಠದ ಮುಂದೆ ಮರು ವಿಚಾರಣೆ ನಡೆಯಲಿದೆ.
ನಾನು ಈ ಬಗ್ಗೆ ಪರಿಶೀಲಿಸುತ್ತೇನೆ. ಇದು ತ್ರಿಸದಸ್ಯ ಪೀಠದ ವಿಷಯವಾಗಿದೆ. ವಿಚಾರಣೆಗೆ ದಿನಾಂಕ ನಿಗದಿಪಡಿಸುತ್ತೇವೆ ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದರು.
ಹಿಜಾಬ್‌ ವಿವಾದದ ಕುರಿತು ಸುಪ್ರೀಂ ಕೋರ್ಟ್‍ನ ಇಬ್ಬರು ನ್ಯಾಯಾಧೀಶರ ಪೀಠವು ಕಳೆದ ವರ್ಷ ಅಕ್ಟೋಬರ್ 13ರಂದು ವಿಭಿನ್ನ ತೀರ್ಪುಗಳನ್ನು ನೀಡಿತ್ತು.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement