ಬೆಂಗಳೂರು:ಕರ್ನಾಟಕದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಹಳ್ಳಿ ಹಳ್ಳಿಗಳಲ್ಲೂ ಕೊರೊನಾ ಸೋಂಕು ಹರಡುತ್ತಿದ್ದು, ರಾಜ್ಯದ ಜನರ ಹಿತದೃಷ್ಟಿಯಿಂದ ಲಾಕ್ಡೌನ್ ಮುಂದುವರೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಸಾವಿನ ಸಂಖ್ಯೆ, ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಇದನ್ನು ತಡೆಯುವ ಉದ್ದೇಶದಿಂದ ಲಾಕ್ಡೌನ್ ಮುಂದುವರಿಸಲಿದ್ದೇವೆ. ರಾಜ್ಯದ ಜನ ಸಹಕರಿಸಬೇಕೆಂದು ಮನವಿ ಮಾಡುತ್ತೇನೆ. ಮೇ 24 ರ ವರೆಗೆ ಲಾಕ್ಡೌನ್ ಜಾರಿ ಮಾಡಲಾಗಿತ್ತು. ಇದರಿಂದಾಗಿ ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರುತ್ತಿದೆ. ತಜ್ಞರ ಅಭಿಪ್ರಾಯ ಪರಿಗಣಿಸಿ ಕಠಿಣ ನಿರ್ಬಂಧವನ್ನು ಜೂನ್ 7 ರ ವರೆಗೆ ಮುಂದುವರೆಸಲಾಗುವುದು.ಈಗಿರುವ ಕಠಿಣ ನಿಯಮಗಳೇ ಮುಂದವರಿಯಲಿವೆ ಎಂದು ಹೇಳಿದ್ದಾರೆ.
ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಡೈರಿ ಮತ್ತು ಹಾಲಿನ ಬೂತ್ಗಳು, ಮಾಂಸ ಮತ್ತು ಮೀನು ಮತ್ತು ಪ್ರಾಣಿಗಳ ಮೇವಿನೊಂದಿಗೆ ವ್ಯವಹರಿಸುವ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಬೆಳಿಗ್ಗೆ 10 ರವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ. ನಂತರವೂ ಜನರು ತಿರುಗಾಡುತ್ತಿದ್ದರೆ ಇದಕ್ಕೆ ಇನ್ಮುಂದೆ ಅವಕಾಶ ಇಲ್ಲ. ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ತಜ್ಞರ ಸಲಹೆ ಮೇರೆಗೆ ಕಠಿಣ ನಿರ್ಬಂಧಗಳನ್ನು ಮುಂದುವರೆಸಲಾಗಿದೆ. ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಡೈರಿ ಮತ್ತು ಹಾಲಿನ ಬೂತ್ಗಳು, ಮಾಂಸ ಮತ್ತು ಮೀನು ಮತ್ತು ಪ್ರಾಣಿಗಳ ಮೇವಿನೊಂದಿಗೆ ವ್ಯವಹರಿಸುವ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಬೆಳಿಗ್ಗೆ 10 ರವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ., ಬೆಂಗಳೂರಿನಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಸೂಚಿಸಲಾಗಿದೆ. ಇನ್ಮುಂದೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.
ಸಾರ್ವಜನಿಕರು ಸಹಕಾರ ನೀಡಬೇಕು. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಶುಕ್ರವಾರ 52,581 ಸೋಂಕಿತರಾದಂತವರು ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜೊತೆಗೆ ಹೊಸದಾಗಿ 32,218 ಜನರಿಗೆ ಸೋಂಕು ತಗುಲಿದೆ. 353 ಸೋಂಕಿತರು ಮೃತಪಟ್ಟಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ