
ಮಂಗಳೂರು : ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಣಂಬೂರಿನಲ್ಲಿರುವ ಎನ್.ಎಂ.ಪಿ.ಎ. ಮುಖ್ಯ ದ್ವಾರದ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ರಾಯಚೂರು ಮೂಲದ, ಸಿಐಎಸ್‌ಎಫ್ ಸಬ್ ಇನ್ ಸ್ಪೆಕ್ಟರ್ ಝಾಕಿರ್ ಹುಸೈನ್(54) ಎಂದು ಗುರುತಿಸಲಾಗಿದೆ. ಝಾಕಿರ್ ಹುಸೈನ್ ಅವರು ನವ ಮಂಗಳೂರು ಬಂದರಿನ ಮುಖ್ಯ ದ್ವಾರದಲ್ಲಿ ರಾತ್ರಿ ಪಾಳಿಯ ಕೆಲಸ ನಿರ್ವಹಿಸಿದ್ದು, ಭಾನುವಾರ ಬೆಳಗ್ಗೆ 6:30ರ ಸುಮಾರಿಗೆ ವಾಶ್ ರೂಮಿಗೆ ತೆರಳಿ ತನ್ನ ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಪಣಂಬೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಪ್ರಕರಣದ ದಾಖಲಿಸಿಕೊಂಡಿದ್ದಾರೆ. ತನಿಖೆ ನಡೆದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.



ನಿಮ್ಮ ಕಾಮೆಂಟ್ ಬರೆಯಿರಿ