ಹುಬ್ಬಳ್ಳಿ : ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಭೀಕರ ಹತ್ಯೆ

ಹುಬ್ಬಳ್ಳಿ: ನಗರದ ಖಾಸಗಿ ಹೋಟೆಲ್​ನಲ್ಲಿ ತಂಗಿದ್ದ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನು ಮಂಗಳವಾರ ಚಾಕುವಿನಿಂದ ಇರಿದು ಮಂಗಳವಾರ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಭಕ್ತರ ಸೋಗಿನಲ್ಲಿ ಬಂದ ಕಿಡಿಗೇಡಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಅವರು ಹುಬ್ಬಳ್ಳಿಯ ಉಣಕಲ್‌ ಕರೆ ಸಮೀಪವಿರುವ ಹೋಟೆಲ್​ನಲ್ಲಿ ಚಂದ್ರಶೇಖರ ತಂಗಿದ್ದರು. ದುಷ್ಕರ್ಮಿಗಳು ಚಾಕು ಹಿಡಿದು ಹೋಟೆಲ್​ನಿಂದ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಚಂದ್ರಶೇಖರ ಗುರೂಜಿ ಅವರ ದೇಹಕ್ಕೆ ದುಷ್ಕರ್ಮಿಗಳು ಹಲವಾರು ಬಾರಿ ಚಾಕುವಿನಿಂದ ಇರಿದಿದ್ದಾರೆ ಎಂದು ಹೇಳಲಾಗಿದೆ. ಮಧ್ಯಾಹ್ನ 12:15ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಚಾಕು ಇರಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೋಟೆಲ್‌ ತಂಗಿದ್ದ ಇವರನ್ನು ಕರೆ ಮಾಡಿದ ಇಬ್ಬರು ರಿಸೆಪ್ಶನ್‌ ಜಾಗದಲ್ಲಿ ಇಬ್ಬರು ಕುಳಿತಿದ್ದರು. ಅಲ್ಲಿಗೆ ಚಂದ್ರಶೇಕರ ಗುರೂಜಿ ಬಂದಾಗ ಕಾಲಿಗೆ ಬೀಳುವ ನಾಟಕವಾಡಿ ಅವರಿಗೆ ಚಾಕುವಿನಿಂದ ಇರಿಯಲಾಗಿದೆ. ಓರ್ವ ಕಾಲಿಗೆ ಬೀಳುವಾಗ ಮತ್ತೋರ್ವ ಚಾಕು ಇರಿದಿದ್ದಾನೆ. ಟಿವಿಯಲ್ಲಿ ಸೆರೆಯಾಗಿದೆ.  40 ಬಾರಿ ಚಾಕುವಿನಿಂದ ಇರಿಯಲಾಗಿದೆ ಎಂದು ಹೇಳಲಾಗಿದ್ದು, ಪರಿಚಯ ಇರುವವರಿಂದಲೇ ಈ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಪ್ರಮುಖ ಸುದ್ದಿ :-   ಶಿರಸಿ: ಕೆಪಿಸಿಸಿ ಸದಸ್ಯ ದೀಪಕ ದೊಡ್ಡೂರು, ಇತರರ ನಿವಾಸದ ಮೇಲೆ ಐಟಿ ದಾಳಿ

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಆಯುಕ್ತ ಲಾಭೂರಾಮ, ಡಿಸಿಪಿ ಸಾಹಿಲ್ ಬಾಗ್ಲಾ ಪರಿಶೀಲನೆ ನಡೆಸಿದ್ದಾರೆ.
ಸರಳ ವಾಸ್ತುವಿನ ಬಗ್ಗೆ ಸಂಶೋಧಕರಾಗಿದ್ದ ಡಾ.ಚಂದ್ರಶೇಖರ ಅಂಗಡಿ(ಗುರೂಜಿ) ಅವರು 1995 ರಲ್ಲಿ ‘ಶರಣ ಸಂಕುಲ ಟ್ರಸ್ಟ್’ ಆರಂಭಿಸಿ ಸಾಮಾಜಿಕ ಕಾರ್ಯದಲ್ಲಿ ನಿರತರಾಗಿದ್ದರು.
ಜನರಿಗೆ ಸರಳ ವಾಸ್ತುವಿನ ಬಗ್ಗೆ ಅರಿವು ಮೂಡಿಸುವ ಕಾಯಕದಲ್ಲಿ ಚಂದ್ರಶೇಖರ ಗುರೂಜಿ ನಿರತವಾಗಿದ್ದರು. ಪ್ರತ್ಯೇಕ ವಾಹಿನಿ ತೆರೆದು ವಾಸ್ತು ಬಗ್ಗೆ ಮಾಹಿತಿ ನೀಡುತ್ತಿದ್ದರು.

ಸಿವಿಲ್‌ ಇಂಜಿನಿಯರ್‌, ಮೂಲತಃ ಬಾಗಲಕೋಟೆಯವರು…
ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಮೂಲತಃ ಬಾಗಲಕೋಟೆ ನಗರದ ಮೋಟಗಿ ಗಲ್ಲಿಯ ನಿವಾಸಿಯಾಗಿದ್ದರು.
ಮೋಟಗಿ ಗಲ್ಲಿಯ ವಿರೂಪಾಕ್ಷಪ್ಪ ಅಂಗಡಿ, ನೀಲವ್ವ‌ ಅಂಗಡಿಯವರ ಪುತ್ರನಾಗಿದ್ದ ಗುರೂಜಿ, ಆರು ಮಂದಿ ಮಕ್ಕಳಲ್ಲಿ ಚಂದ್ರಶೇಖರ ಮೂರನೇಯವರಾಗಿದ್ದರು. ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಬಿಇ ಓದಿದ್ದರು.
ಸಿವಿಲ್ ಎಂಜಿನಿಯರಿಂಗ್ ವ್ಯಾಸಂಗ ಮುಗಿಸಿ ನೌಕರಿ ಅರಸಿ ಅವರು ಸುಮಾರು ಮೂವತ್ತು ವರ್ಷಗಳ ಹಿಂದೆ ಮುಂಬಯಿಗೆ ತೆರಳಿದ್ದರು. ಆರಂಭದಲ್ಲಿ ಕಟ್ಟಡ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದ ಅವರು, ನಂತರ ಸರಳ ವಾಸ್ತು ಆರಂಭಿಸಿದ್ದರು. ಮುಂಬಯಿ, ಬೆಂಗಳೂರು, ಹುಬ್ಬಳ್ಳಿಯಲ್ಲಿ ವಾಸಿಸುತ್ತಿದ್ದರು.
ಅವರ ಸರಳ ವಾಸ್ತು ವಿಚಾರ ಹೆಚ್ಚು ಪ್ರಚಾರ ಪಡೆದು ವಾಸ್ತುಪ್ರಿಯರಲ್ಲಿ ಜನಪ್ರಿಯತೆ ಗಳಿಸಿದ್ದ ಇವರು, ಒಬ್ಬ ಸ್ಟಾರ್ ವಾಸ್ತು ತಜ್ಞ ಎಂದೇ ಪರಿಗಣಿತವಾಗಿದ್ದರು.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement