ಗುಜರಾತ್ ಚುನಾವಣೆ ; ಟೈಮ್ಸ್ ನೌ -ನವಭಾರತ-ಇಟಿಜಿ ಒಪಿನಿಯನ್ ಪೋಲ್ : ಬಿಜೆಪಿ ಗೆಲ್ಲುತ್ತಾ..? ಕಾಂಗ್ರೆಸ್‌ಗೆ ಆಪ್‌ ಅಡ್ಡಿಯಾಗುತ್ತಾ..? ಸಮೀಕ್ಷೆಯಲ್ಲಿ ಬಹಿರಂಗ

ಅಹ್ಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆ 2022 ಘೋಷಣೆಯಾಗಿದೆ. ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಗುಜರಾತ್‌ನಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಹಿಮಾಚಲ ಪ್ರದೇಶದೊಂದಿಗೆ ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಗುಜರಾತ್‌ಗೆ ಸಂಬಂಧಿಸಿದಂತೆ ಟೈಮ್ಸ್ ನೌ -ನವಭಾರತ ಮತ್ತು ಇಟಿಜಿಯ ಅಭಿಪ್ರಾಯ ಸಂಗ್ರಹ (opinion poll) ಹೊರಬಿದ್ದಿದೆ. ಇದು ಗುಜರಾತ್ ನಲ್ಲಿ ಮತ್ತೊಮ್ಮೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದೆ.
ಸಮೀಕ್ಷೆಯಲ್ಲಿ ಬಿಜೆಪಿ 125-130 ಸ್ಥಾನಗಳನ್ನು ಪಡೆಯುತ್ತಿದೆ. ಮತ್ತೊಂದೆಡೆ, ಕಾಂಗ್ರೆಸ್ 29 ರಿಂದ 33 ಸ್ಥಾನಗಳನ್ನು ಪಡೆಯುತ್ತಿದೆ. ಇದಲ್ಲದೇ ಆಮ್ ಆದ್ಮಿ ಪಕ್ಷ 20 ರಿಂದ 24 ಸ್ಥಾನಗಳನ್ನು ಪಡೆಯಬಹುದು. ಇನ್ನೊಂದೆಡೆ ಇತರರ ಖಾತೆಗೆ ಒಂದರಿಂದ ಮೂರು ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಅಭೀಪ್ರಾಯ ಸಂಗ್ರಹದ ಸಮೀಕ್ಷೆ ಹೇಳಿದೆ.
ಗುಜರಾತ್‌ನಲ್ಲಿ ಬಿಜೆಪಿ ಗೆಲ್ಲಲು ಕಾರಣವಾಗಬಹುದಾದ ಅಂಶಗಳು ?
ಒಪಿನಿಯನ್ ಪೋಲ್ ಪ್ರಕಾರ, ಗುಜರಾತ್‌ನಲ್ಲಿ ಬಿಜೆಪಿ ಏಕೆ ಜಯಗಳಿಸುತ್ತಿದೆ ಎಂಬ ಬಗ್ಗೆ ತಿಳಿಸಲಾಗಿದೆ. ಸಮೀಕ್ಷೆ ಪ್ರಕಾರ ಅಭಿವೃದ್ಧಿ ಮಾದರಿಯಲ್ಲಿ ಬಿಜೆಪಿ ಶೇ.45ರಷ್ಟು ಮತಗಳನ್ನು ಪಡೆಯುತ್ತಿದೆ. ಇನ್ನೊಂದೆಡೆ ಬಲಿಷ್ಠ ಸಂಘಟನೆಯಿಂದಾಗಿ ಬಿಜೆಪಿ ಶೇ.19ರಷ್ಟು ಮತಗಳನ್ನು ಪಡೆಯುತ್ತಿದೆ. ಜೊತೆಗೆ ಗುಜರಾತ್‌ನಲ್ಲಿ ದುರ್ಬಲ ಪ್ರತಿಪಕ್ಷಗಳಿಂದಾಗಿ ಬಿಜೆಪಿ 27% ಮತಗಳನ್ನು ಪಡೆಯುತ್ತಿದೆ.

ಪ್ರಮುಖ ಸುದ್ದಿ :-   ವೀಡಿಯೊ...| 'ತೃಣಮೂಲ ಕಾಂಗ್ರೆಸ್ಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ' ಎಂದ ಕಾಂಗ್ರೆಸ್‌ ಹಿರಿಯ ನಾಯಕ...! ಟಿಎಂಸಿ ಕೆಂಡ

ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಸಿಗಬಹುದು..?
ಬಿಜೆಪಿ- 125-130
ಕಾಂಗ್ರೆಸ್- 25-33
ಆಪ್‌ – 20-24
ಇತರೆ – 2-4

ಯಾವ ಪಕ್ಷಕ್ಕೆ ಎಷ್ಟು ಮತ?
ಬಿಜೆಪಿ – 45%
ಕಾಂಗ್ರೆಸ್ – 21%
ಆಪ್‌- 29%
ಇತರರು- 5%

ಗುಜರಾತ್ ನಲ್ಲಿ ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ
ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಗುಜರಾತ್ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಹಿಮಾಚಲ ಪ್ರದೇಶದೊಂದಿಗೆ ಮತ ಎಣಿಕೆ ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈ ವಿಷಯವನ್ನು ಪ್ರಕಟಿಸಿದ್ದಾರೆ. ಒಟ್ಟು 182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಮೊದಲ ಹಂತದಲ್ಲಿ 89 ಸ್ಥಾನಗಳಿಗೆ ಹಾಗೂ ಎರಡನೇ ಹಂತದಲ್ಲಿ 93 ಸ್ಥಾನಗಳಿಗೆ ಮತದಾನ ನಡೆಯಲಿದೆ. ಗುಜರಾತ್ ನಲ್ಲಿ ಕಳೆದ ಆರು ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಸತತ ಗೆಲುವು ದಾಖಲಿಸಿದೆ. 2017 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 99 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ 77 ಸ್ಥಾನಗಳನ್ನು ಪಡೆದಿತ್ತು.

ಕಳೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನ ಮತಗಳ ಪ್ರಮಾಣ
ಶೇಕಡಾವಾರು ಲೆಕ್ಕದಲ್ಲಿ, ಆ ಚುನಾವಣೆಯಲ್ಲಿ ಬಿಜೆಪಿ ಶೇಕಡಾ 49.05 ಮತಗಳನ್ನು ಪಡೆದರೆ, ಕಾಂಗ್ರೆಸ್ ಶೇಕಡಾ 42.97 ಮತಗಳನ್ನು ಗಳಿಸಿತ್ತು. ಕಳೆದ ವಿಧಾನಸಭೆ ಚುನಾವಣೆ ಬಳಿಕ ಹಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದರು. ಇದರಿಂದ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರ ಸಂಖ್ಯೆ 111ಕ್ಕೆ ಏರಿಕೆಯಾಗಿದ್ದು, ಕಾಂಗ್ರೆಸ್ ಸದಸ್ಯರ ಸಂಖ್ಯೆ 62ಕ್ಕೆ ಇಳಿದಿದೆ.

ಪ್ರಮುಖ ಸುದ್ದಿ :-   ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ

ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷ ಶಕ್ತಿ ಪ್ರದರ್ಶನ
ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಕೂಡ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತನ್ನ ಶಕ್ತಿ ಪ್ರದರ್ಶನ ಮಾಡಲಿದೆ. ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಲ್ಲಿಯವರೆಗೆ ಹತ್ತಾರು ಬಾರಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಗುಜರಾತ್ ಮತ್ತು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ಅವರು ಗುಜರಾತ್‌ನಲ್ಲಿ ನೂರಾರು ಕೋಟಿ ವೆಚ್ಚದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದ್ದಾರೆ.

4.3 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement