ಎನ್‌ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಹೆಸರು ಘೋಷಣೆ

ನವದೆಹಲಿ : ಉಪರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರದ ರಾಜ್ಯಪಾಲ ಮತ್ತು ತಮಿಳುನಾಡಿನ ಬಿಜೆಪಿಯ ಉನ್ನತ ನಾಯಕರಲ್ಲಿ ಒಬ್ಬರಾಗಿದ್ದ ಸಿ.ಪಿ. ರಾಧಾಕೃಷ್ಣನ್ ಅವರ ಹೆಸರನ್ನು ಭಾನುವಾರ ಘೋಷಿಸಲಾಗಿದೆ. ಉಪರಾಷ್ಟ್ರಪತಿ ಚುನಾವಣೆಗೆ ಪಕ್ಷದ ಆಯ್ಕೆಯನ್ನು ಅಂತಿಮಗೊಳಿಸಲು ಕರೆಯಲಾಗಿದ್ದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ಅಕ್ಟೋಬರ್ 20, 1957 ರಂದು ತಮಿಳುನಾಡಿನ ತಿರುಪ್ಪೂರಿನಲ್ಲಿ ಜನಿಸಿದ ಅವರು 2003 ರಿಂದ 2006 ರವರೆಗೆ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ರಾಧಾಕೃಷ್ಣನ್ ತಮ್ಮ ರಾಜಕೀಯ ಪ್ರಯಾಣದಲ್ಲಿ ಹಲವಾರು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅವರು ಜುಲೈ 31, 2024 ರಂದು ಮಹಾರಾಷ್ಟ್ರದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡರು. ಇದಕ್ಕೂ ಮೊದಲು, ಅವರು ಫೆಬ್ರವರಿ 18, 2023 ರಿಂದ ಜುಲೈ 30, 2024 ರವರೆಗೆ ಜಾರ್ಖಂಡ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು.

ಅವರು ಮಾರ್ಚ್ ನಿಂದ ಜುಲೈ 2024 ರವರೆಗೆ ತೆಲಂಗಾಣ ರಾಜ್ಯಪಾಲರಾಗಿ ಮತ್ತು ಮಾರ್ಚ್ ನಿಂದ ಆಗಸ್ಟ್ 2024 ರವರೆಗೆ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿಗಳನ್ನು ಹೊಂದಿದ್ದರು.
1998 ಮತ್ತು 1999 ರಲ್ಲಿ ಎರಡು ಬಾರಿ ಕೊಯಮತ್ತೂರು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ಕಾರ್ಯಕರ್ತರಾಗಿದ್ದು ನಂತರ ಜನ ಸಂಘದ ಮೂಲಕ ತಮ್ಮ ರಾಜಕೀಯ ಪ್ರಯಾಣ ಪ್ರಾರಂಭಿಸಿದರು.
ಬಿಜೆಪಿಯ ತಮಿಳುನಾಡು ಅಧ್ಯಕ್ಷರಾಗಿ, ರಾಧಾಕೃಷ್ಣನ್ ಅವರು ನದಿಗಳ ಜೋಡಣೆ, ಭಯೋತ್ಪಾದನೆಯನ್ನು ಎದುರಿಸುವುದು ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡುವಂತಹ ವಿಷಯಗಳ ಮೇಲೆ ಕೇಂದ್ರೀಕರಿಸಿದ 93 ದಿನಗಳ ರಥಯಾತ್ರೆ ನಡೆಸಿದ್ದರು. ಸಂಸತ್ತಿನಲ್ಲಿ, ಅವರು ಜವಳಿ ಸ್ಥಾಯಿ ಸಮಿತಿಯ ಅಧ್ಯಕ್ಷತೆ ವಹಿಸಿದ್ದರು ಮತ್ತು ಹಣಕಾಸು ಮತ್ತು ಸಾರ್ವಜನಿಕ ಉದ್ಯಮಗಳಿಗೆ ಸಂಬಂಧಿಸಿದ ಹಲವಾರು ಸಮಿತಿಗಳಲ್ಲಿ ಕೆಲಸ ಮಾಡಿದರು..

ಪ್ರಮುಖ ಸುದ್ದಿ :-   ವಿಡಿಯೊ | ಸಿಜೆಪಿ ಸಂಸ್ಥಾಪಕ ಅಭಿಜೀತ ದೀಪ್ಕೆ ಮುಖಕ್ಕೆ ಶಾಯಿ ಎಸೆದ ಮಹಿಳೆ ; ಹೈಡ್ರಾಮಾಕ್ಕೆ ಸಾಕ್ಷಿಯಾದ ಜಂತರ್ ಮಂತರ್‌ ಪ್ರತಿಭಟನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement