ನವದೆಹಲಿ; ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 56.76 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ತಿಳಿಸಿದೆ.
ಈವರೆಗೆ ಕೇಂದ್ರವು ರಾಜ್ಯಗಳಿಗೆ 56,76,14,390 ಲಸಿಕೆ ಡೋಸ್ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 3,03,90,091 ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ.
ಭಾನುವಾರ ಲಭ್ಯವಿರುವ ಮಾಹಿತಿಯ ಪ್ರಕಾರ, ತ್ಯಾಜ್ಯಗಳು ಸೇರಿದಂತೆ ಒಟ್ಟು 54,02,53,875 ಪ್ರಮಾಣದಷ್ಟು ಲಸಿಕೆಗಳು ಬಳಕೆಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ 5,00,240 ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.
ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 54,38,46,290 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ