ರಾಜ್ಯದ 9 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಐದು ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಆಂಧ್ರಪ್ರದೇಶ ಕರಾವಳಿ ಪ್ರದೇಶದ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ರಾಜ್ಯದ 9 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕರಾವಳಿಯಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಐದೂ ದಿನ ಹಗುರದಿಂದ ಸಾಧಾರಣ ಮಳೆ ಆಗಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆ ಅಲ್ಲಲ್ಲಿ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಗದಗ, ಹಾವೇರಿ, ರಾಯಚೂರು ಜಿಲ್ಲೆಗಳು ಮತ್ತು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಶಿರಸಿ ಶಾಸಕ ಭೀಮಣ್ಣ ನಾಯ್ಕ ಮೇಲೆ ಜೇನು ದಾಳಿ

3.8 / 5. 6

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement