ಕೇಜ್ರಿವಾಲ್ ವಿರುದ್ಧ ಎನ್‌ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಶಿಫಾರಸು: ಇದು ಬಿಜೆಪಿಯ ಮತ್ತೊಂದು ಪಿತೂರಿ ಎಂದ ಎಎಪಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆ ಮಾಡುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಇದು ಬಿಜೆಪಿಯ ಮತ್ತೊಂದು ಪಿತೂರಿ ಎಂದು ಆಮ್ ಆದ್ಮಿ ಪಕ್ಷ ಸೋಮವಾರ ಆಕ್ರೋಶ ವ್ಯಕ್ತಪಡಿಸಿದೆ.
ಲೆಫ್ಟಿನೆಂಟ್‌ ಗವರ್ನರ್‌ ವಿ ಕೆ ಸಕ್ಸೆನಾ ಅವರು ಬಿಜೆಪಿಯ ಸೂಚನೆಯ ಮೇರೆಗೆ ದೆಹಲಿ ಮುಖ್ಯಮಂತ್ರಿ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ್ದಾರೆ ಎಂದು ಎಎಪಿ ಆರೋಪಿಸಿದೆ.
ನಿಷೇಧಿತ ಭಯೋತ್ಪಾದಕ ಸಂಘಟನೆ ‘ಸಿಖ್ಸ್ ಫಾರ್ ಜಸ್ಟೀಸ್’ ನಿಂದ ರಾಜಕೀಯ ದೇಣಿಗೆ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಎನ್ಐಎ ತನಿಖೆ ಮಾಡುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದು ರಾಜಭವನ ಮೂಲಗಳು ತಿಳಿಸಿವೆ.

ಕೇಂದ್ರ ಗೃಹ ಕಾರ್ಯದರ್ಶಿಗೆ ಬರೆದ ವಿವರವಾದ ಪತ್ರದಲ್ಲಿ, ಸಕ್ಸೇನಾ ಅವರು ಅರವಿಂದ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವು “ಖಾಲಿಸ್ತಾನಿ ಗುಂಪುಗಳಿಂದ $ 16 ಮಿಲಿಯನ್ ಹಣವನ್ನು ಪಡೆದಿದೆ” ಎಂದು ಪನ್ನುನ್ ಹೇಳಿರುವ ವೀಡಿಯೊವನ್ನು ಉಲ್ಲೇಖಿಸಿದ್ದಾರೆ.
ಖಲಿಸ್ತಾನಿ ಬಣಗಳಿಂದ ಆಮ್ ಆದ್ಮಿ ಪಕ್ಷಕ್ಕೆ ಗಣನೀಯ ಆರ್ಥಿಕ ಬೆಂಬಲಕ್ಕೆ ಪ್ರತಿಯಾಗಿ ದೇವೆಂದರ್ ಪಾಲ್ ಭುಲ್ಲರ್ ಬಿಡುಗಡೆಗೆ ಅನುಕೂಲ ಮಾಡಿಕೊಡುವುದಾಗಿ ಕೇಜ್ರಿವಾಲ್ ಭರವಸೆ ನೀಡಿದ್ದಾರೆ…” ಎಂದು ಹಿಂದೂ ಧಾರ್ಮಿಕ ಸಂಸ್ಥೆಯಿಂದ ದೂರು ಮತ್ತು ಮಾಜಿ ಎಎಪಿ ಕಾರ್ಯಕರ್ತನ ಟ್ವೀಟ್‌ಗಳನ್ನು ಲೆಫ್ಟಿನೆಂಟ್‌ ಗವರ್ನರ್‌ ವಿ ಕೆ ಸಕ್ಸೆನಾ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪ್ರಮುಖ ಸುದ್ದಿ :-   'ಯಾರೂ ಮೋದಿಗೆ ಮತ ಹಾಕಬೇಡಿ' ಎಂದು ತರಗತಿಯೊಳಗೆ ಹೇಳುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕನ ಬಂಧನ

ಮಾಜಿ ಪ್ರೊಫೆಸರ್ ಆಗಿದ್ದ ಭುಲ್ಲರ್ 1993ರ ದೆಹಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಲಾಗಿತ್ತು. 2001 ರಲ್ಲಿ ಅವರಿಗೆ ಮರಣದಂಡನೆ ವಿಧಿಸಲಾಯಿತು ಆದರೆ ನಂತರ ಅದನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಯಿತು.
“ಈ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ನಾಯಕ ಮತ್ತು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಅವರು, ಇದು ಬಿಜೆಪಿಯ ಆದೇಶದ ಮೇರೆಗೆ ಕೇಜ್ರಿವಾಲ್ ವಿರುದ್ಧದ ಮತ್ತೊಂದು ಪಿತೂರಿಯಾಗಿದೆ. ದೆಹಲಿಯ ಎಲ್ಲಾ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಸೋಲುತ್ತದೆ. ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭಯದಿಂದ ಕಂಗೆಟ್ಟಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement