ಆರೋಗ್ಯದಲ್ಲಿ ಏರುಪೇರು; ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ (91) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಏರ್‌ಪೋರ್ಟ್‌ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ (Manipal Hospital) ಎಸ್‌.ಎಂ.ಕೃಷ್ಣ ಅವರನ್ನು ದಾಖಲಿಸಲಾಗಿದ್ದು, ಸದ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಎಸ್.ಎಂ.ಕೃಷ್ಣ ಅವರು ಕಳೆದ 12 ದಿನಗಳ ಹಿಂದೆ ವೈದೇಹಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಡಿಸ್ಚಾರ್ಜ್ ಆಗಿದ್ದರು .ಆದರೆ, ಆರೋಗ್ಯದಲ್ಲಿ ಮತ್ತೆ   ತೀವ್ರ ಏರುಪೇರಾದ ಕಾರಣ ಅವರನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಯಿತು. ಸದ್ಯ ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಲಾಗಿದೆ.

91 ವರ್ಷ ವಯಸ್ಸಿನ ಎಸ್​.ಎಂ.ಕೃಷ್ಣ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದಾರೆ. ಮೊದಲು ಕಾಂಗ್ರೆಸ್​ನಲ್ಲಿದ್ದು ಕರ್ನಾಟಕ ಮುಖ್ಯಮಂತ್ರಿಯಾಗಿದ್ದ ಎಸ್​.ಎಂ.ಕೃಷ್ಣ, ಕೇಂದ್ರ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. 2017ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಕಳೆದ ವರ್ಷ ಅವರಿಗೆ ದೇಶದ ಎರಡನೇ ಅತ್ಯುನ್ನತ ಪ್ರಶಸ್ತಿಯಾದ ಪದ್ಮವಿಭೋಷಣ ಪ್ರಶಸ್ತಿ ನೀಡಲಾಗಿದೆ.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement