ಹೊನ್ನಾವರ : ಅಪರಿಚಿತ ವಾಹನ ಡಿಕ್ಕಿ ; ಯುವಕ ಸಾವು

ಹೊನ್ನಾವರ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ದುರ್ಗಾಂಬಾ ಹೊಟೇಲಿನ ಎದುರಿಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಮಧ್ಯರಾತ್ರಿ ಸಂಭವಿಸಿದೆ ಎಂದು ವರದಿಯಾಗಿದೆ.
ಮೃತ ಯುವಕನನ್ನು ಹೊನ್ನಾವರ ತಾಲೂಕಿನ ಕೆಳಗಿನ ಇಡಗುಂಜಿಯ ಅಂಗಡಿಮನೆಯ ಕಿರಣ ಬಾಲಚಂದ್ರ ನಾಯ್ಕ ( 24 ) ಎಂದು ಗುರುತಿಸಲಾಗಿದೆ. ಮೃತ ಯುವಕ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷ ಬಾಲಚಂದ್ರ ನಾಯ್ಕ  ಇವರ ಮಗ ಎಂದು ತಿಳಿದುಬಂದಿದೆ.
ಹೊನ್ನಾವರ ಕಡೆಯಿಂದ ಮಂಕಿ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಹೋಗುತ್ತಿದ್ದ ಅಪರಿಚಿತ ವಾಹನ ಸ್ಕೂಟರಿನಲ್ಲಿ ಹೋಗುತ್ತಿದ್ದ ಕಿರಣ ನಾಯ್ಕ ಅವರಿಗೆ ಡಿಕ್ಕಿ ಹೊಡೆದಿದೆ. ಚಾಲಕ ತನ್ನ ವಾಹನವನ್ನು ನಿಲ್ಲಿಸದೆ ಚಲಾಯಿಸಿಕೊಂಡು ಹೋಗಿದ್ದಾನೆ. ಘಟನೆಗೆ ಸಂಬಂಧ ಪಟ್ಟಂತೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement