‘ಹಿಂದೂ’ ಶಬ್ದದ ಅರ್ಥದ ಹೇಳಿಕೆ ವಿವಾದ: ಸತೀಶ ಜಾರಕಿಹೊಳಿಯಿಂದ ಸ್ಪಷ್ಟೀಕರಣ ಕೇಳುವೆ ಎಂದ ಡಿಕೆಶಿ

ಹುಬ್ಬಳ್ಳಿ: ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ ಜಾರಕಿಹೊಳಿ ಅವರು ಹಿಂದೂ ಧರ್ಮದ ಅರ್ಥ ಅಸಭ್ಯವಾಗಿದೆ ಎಂಬ ಹೇಳಿಕೆ ನೀಡಿರುವುದನ್ನು ಪಕ್ಷ ತಳ್ಳಿ ಹಾಕುತ್ತದೆ. ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅದರಿಂದ ನಮ್ಮ ಪಕ್ಷಕ್ಕೆ ಯಾವುದೇ ಹಾನಿ ಆಗುವುದಿಲ್ಲ. ಈ ಬಗ್ಗೆ ಅವರಲ್ಲಿ ಸ್ಪಷ್ಟೀಕರಣ ಪಡೆದುಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಕೂಡಾ ಹಿಂದೂ ಧರ್ಮದವನು. ನಮಗೆ ನಮ್ಮದೇ ಆದ ಇತಿಹಾಸವಿದೆ. ಹಾಗಾಗಿ ಸತೀಶ ಅವರ ಹೇಳಿಕೆ ಅವರ ವೈಯಕ್ತಿಕ ವಿಚಾರ. ಅವರು ತಮ್ಮ ಮನೆಯಲ್ಲಿ ಮಾತನಾಡಿದರೇ ಏನೂ ಆಗುವುದಿಲ್ಲ. ಆದರೆ, ಸಾರ್ವಜನಿಕ ಬದುಕಿನಲ್ಲಿ ಈ ತರಹ ಹೇಳಿಕೆ ನೀಡುವುದು ಖಂಡನಾರ್ಹ ಎಂದು ಹೇಳಿದರು.
ಕಾಂಗ್ರೆಸ್ ಭಾರತ ಜೋಡೋ ಯಾತ್ರೆಯಿಂದ ಬಿಜೆಪಿಗೆ ಈಗ ಭಯ ಬಂದಿದೆ. ಈ ಹಿಂದೆ ಮಹತ್ಮಾ ಗಾಂಧೀಜಿ ಭಾರತ ಛೋಡೊ ಚಳವಳಿ ಮಾಡಿದ್ದರು. ಆದರೆ ಮೋದಿ ಭಾರತ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಆದರೆ ಈಗ ರಾಹುಲ್ ಗಾಂಧಿ ಭಾರತ ಜೋಡೋ ಮಾಡುತ್ತಿದ್ದಾರೆ. ಇದನ್ನು ಸಹಿಸದ ಬಿಜೆಪಿಯವರು ಇದನ್ನು ನಿಲ್ಲಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಪ್ರಮುಖ ಸುದ್ದಿ :-   ಕರ್ಣಾಟಕ ಬ್ಯಾಂಕ್‌ ಎಂಡಿ-ಸಿಇಒ, ಕಾರ್ಯನಿರ್ವಾಹಕ ನಿರ್ದೇಶಕ ರಾಜೀನಾಮೆ

 

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement