ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ 5 ದಿನ ಭಾರೀ ಮಳೆ; ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನ ಜೋರಾದ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ನಾಳೆಯಿಂದ ಮೂರು ದಿನ ಮಳೆ ಜೋರಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಆಗಸ್ಟ್ 3, 4ರಂದು ಹಾಗೂ ಮಂಡ್ಯ ಮತ್ತು ರಾಮನಗರದಲ್ಲಿ ಆಗಸ್ಟ್ 4 ರಂದು ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ನೀಡಿದೆ.

ಧಾರವಾಡ, ಗದಗ, ಬಳ್ಳಾರಿ, ಮಂಡ್ಯ, ರಾಮನಗರದಲ್ಲಿ ಆಗಸ್ಟ್ 2ರಿಂದ 4ರ ವರೆಗೆ ಹಾಗೂ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿಯಲ್ಲಿ ಆಗಸ್ಟ್ 4ರಂದು ಮಳೆಯಾಗಲಿದೆ. ಈ ಸಂಬಂಧ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಆಗಸ್ಟ್ 3 ರವರೆಗೆ ಸಾಧಾರಣಕ್ಕಿಂತ ಹೆಚ್ಚು ಮಳೆಯಾದರೆ, ಆಗಸ್ಟ್ 4ರಂದು ಭಾರಿ ಮಳೆ ಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement