ಸಿಎಂ ಬಿಎಸ್‌ವೈ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ: ಸಚಿವ ಜೋಶಿ

ಹುಬ್ಬಳ್ಳಿ: ಬಿಜೆಪಿಯ ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೀಡಿದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಭಾನುವಾರ ಬೆಂಗಳೂರಲ್ಲಿ ಹೈಕಮಾಂಡ್‌ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ ಝೊಶಿ ಅವರಿಂದ ಈ ಹೇಳಿಕೆ ಬಂದಿದೆ.
ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ ಜೋಶಿ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಕೋವಿಡ್ ಬಿಕ್ಕಟ್ಟಿನ ಸಮಯದಲ್ಲಿಯೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಂದ ರಾಜೀನಾಮೆ ಕೊಡಿಸುವ ಯಾವ ಪ್ರಶ್ನೆಯೂ ಪಕ್ಷದ ಮುಂದೆ ಇಲ್ಲ. ಮುಖ್ಯಮಂತ್ರಿಗಳು ಸಮರ್ಥರಾಗಿ, ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬದಲಾವಣೆ ಮಾಡುವಂತಹ ಯಾವುದೇ ಪ್ರಶ್ನೆಯೇ ಇಲ್ಲ. ಹೈಕಮಾಂಡ್ ನಿಂದಲೂ ಅವರಿಗೆ ಯಾವುದೇ ರೀತಿಯ ಸೂಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಹಾಗೂ ಆ ಮೂಲಕ ಯಡಿಯೂರಪ್ಪ ಹೇಳಿಕೆಯಿಂದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಯಡಿಯೂರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಪ್ರಮುಖ ಸುದ್ದಿ :-   ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಇಡಿ ಶಾಕ್‌; ಹಲವು ಕಡೆ ದಾಳಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement