ವಿಧಾನಸಭೆ ಅಧಿವೇಶನ, ಭಾರತ್‌ ಜೋಡೊ ಯಾತ್ರೆ ನಡುವೆಯೇ ಡಿಕೆಶಿಗೆ ಇ.ಡಿ ಸಮನ್ಸ್‌

ಬೆಂಗಳೂರು: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ) ಸಮನ್ಸ್ ಜಾರಿ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 19ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ನಲ್ಲಿ ಸೂಚಿಸಲಾಗಿದೆ.
ಈ ಕುರಿತು ಟ್ವೀಟ್‌ ಮಾಡಿ ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು, ಭಾರತ್‌ ಜೋಡೊ ಯಾತ್ರೆ ಹಾಗೂ ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇ.ಡಿ ನನಗೆ ಸಮನ್ಸ್‌ ನೀಡಿದೆ ಎಂದು ತಿಳಿಸಿದ್ದಾರೆ.
ತನಿಖೆಗೆ ನಾನು ಸಹಕಾರ ನೀಡುತ್ತೇನೆ. ಆದರೆ ಇ.ಡಿ.ನನಗೆ ಸಮನ್ಸ್‌ ನೀಡಿರುವ ಸಮಯದ ಬಗ್ಗೆ ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ನನಗೆ ತೊಂದರೆಯಾಗುತ್ತಿದೆ ಎಂದು ಟ್ವೀಟ್‌ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ದೆಹಲಿಯ ಸಫ್ದರ್‌ಜಂಗ್‌ ಎನ್‌ಕ್ಲೇವ್‌ನಲ್ಲಿರುವ ಶಿವಕುಮಾರ್ ಒಡೆತನದ ನಿವಾಸದಲ್ಲಿ ₹ 8.59 ಕೋಟಿ ನಗದು ದೊರೆತಿದ್ದರಿಂದ, ಐಪಿಸಿಯ ಸೆಕ್ಷನ್‌ 120 ‘ಬಿ’ ಅಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಶಿವಕುಮಾರ್​ ಅವರು ಬೇನಾಮಿ ಆಸ್ತಿ ಮಾಡಿದ್ದಾರೆ. 20ಕ್ಕೂ ಹೆಚ್ಚು ಬ್ಯಾಂಕ್​ಗಳಲ್ಲಿ 317ಕ್ಕೂ ಹೆಚ್ಚು ಅಕೌಂಟ್​ನಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ. ಮಗಳ ಹೆಸರಲ್ಲಿ 108 ಕೋಟಿ ಅಕ್ರಮ ವ್ಯವಹಾರ ಮಾಡಿದ್ದಾರೆ. 2018ರಲ್ಲಿ ದೆಹಲಿಯ ಸಪ್ತರ್​ ಜಂಗ್ ಫ್ಲ್ಯಾಟ್​​ನಲ್ಲಿ​ ಸಿಕ್ಕಂತಹ 8.5 ಕೋಟಿ ಹಣಕ್ಕೂ ಲೆಕ್ಕ ಕೊಟ್ಟಿಲ್ಲ. ಎಂಬಿತ್ಯಾದಿ ಆರೋಪಗಳು ಅವರ ಮೇಲಿದೆ.

ಪ್ರಮುಖ ಸುದ್ದಿ :-   ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ; ಪತ್ರದಲ್ಲೇನಿದೆ..?

https://twitter.com/DKShivakumar/status/1570331064153014272?ref_src=twsrc%5Etfw%7Ctwcamp%5Etweetembed%7Ctwterm%5E1570331064153014272%7Ctwgr%5E39ae6e2e2fa27ad5ffa170d2c894c879263660e5%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada
ಕನ್ಯಾಕುಮಾರಿಯಲ್ಲಿ ಆರಂಭಗೊಂಡು ಕಾಶ್ಮೀರದ ಶ್ರೀನಗರದಲ್ಲಿ ಕೊನೆಗೊಳ್ಳುವ ಭಾರತ್‌ ಜೋಡೊ ಯಾತ್ರೆ ಸೆಪ್ಟೆಂಬರ್‌ 7 ರಂದುಆರಂಭವಾಗಿದ್ದು, 150 ದಿನಗಳ ಕಾಲ 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಚರಿಸಲಿದೆ. ಇದು ಶೀಘ್ರವೇ ಕರ್ನಾಟಕವನ್ನು ಪ್ರವೇಶಿಸಲಿದೆ. ಹಾಗೂ ಈಗ ರಾಜ್ಯದ ವಿಧಾನಸಭೆ ಅಧಿವೇಶನ ನಡೆಯುತ್ತಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement