ಮುಂಗಾರು ತೀವ್ರ; ಮತ್ತೆ 4 ದಿನ ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 4 ದಿನ ಅಂದರೆ ಜುಲೈ 19ರ ವರೆಗೆ ಭಾರಿ ಮಳೆಯಾಗಲಿಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಜುಲೈ 16ರಂದು ರೆಡ್ ಅಲರ್ಟ್ ಘೋಷಿಸಲಾಗಿದೆರೆಡ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಜುಲೈ 14, 15 ಹಾಗೂ 17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, . ಮುಂಜಾಗೃತಾ ಕ್ರಮವಾಗಿ ನದಿ ಪಾತ್ರದ ಜನತೆಗೆ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚಿಸಲಾಗುತ್ತಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಿಯೆ ಆರೆಂಜ್ ಅಲರ್ಟ್, ರಾಮನಗರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಾರದಿಂದ ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು ಹಲವೆಡೆ ಭಾರಿ ಮಳೆಯಾಗುತ್ತಿದೆ. ಜುಲೈ 19ರವರೆಗೂ ಭಾರೀ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಜುಲೈ 14 ಹಾಗೂ 18ರಂದು ಯೆಲ್ಲೋ ಅಲರ್ಟ್ ಘೋಷೊಸಲಾಗಿದ್ದು, ಜುಲೈ 15, 16, 17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೆರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ.

ಪ್ರಮುಖ ಸುದ್ದಿ :-   ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ- ದೃಶ್ಯ ಪ್ರಕಟಿಸದಂತೆ ತಡೆಯಾಜ್ಞೆ ತಂದ ಈಶ್ವರಪ್ಪ ಪುತ್ರ ಕಾಂತೇಶ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement