ಬೆಂಗಳೂರು: ಸುಮಾರು ಆರೇಳು ತಿಂಗಳಿಂದ ಖಾಲಿಯಿದ್ದ ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ ಬಾಬು ಸೇರಿದಂತೆ ನಾಲ್ವರನ್ನು ನಾಮ ನಿರ್ದೇಶನ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಕುರಿತು ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ ಬಾಬು, ಕರ್ನಾಟಕ ಸರ್ಕಾರದ ಅನಿವಾಸಿ ಭಾರತೀಯ ಸಮಿತಿ ಅಧ್ಯಕ್ಷೆ ಶೃಂಗೇರಿಯ ಡಾ.ಆರತಿ ಕೃಷ್ಣ, ಎಐಸಿಸಿ ಪರಿಶಿಷ್ಟ ಜಾತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಹುಬ್ಬಳ್ಳಿಯ ಎಫ್.ಎಚ್. ಜಕ್ಕಪ್ಪನವರ ಹಾಗೂ ಮೈಸೂರಿನ ಪತ್ರಕರ್ತ ಶಿವಕುಮಾರ ಕೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಮೇಶ್ ಬಾಬು ಅವರ ಅಧಿಕಾರ ಅವಧಿ 2026ರ ಜುಲೈ 21ರವರೆಗೆ ಇರಲಿದೆ. ಉಳಿದ ಮೂವರು 6 ವರ್ಷಗಳ ಅವಧಿಗೆ ಪರಿಷತ್ ಸದಸ್ಯರಾಗಿ ಇರಲಿದ್ದಾರೆ.
ಎಫ್.ಎಚ್. ಜಕ್ಕಪ್ಪನವರ, ಆರತಿ ಕೃಷ್ಣ, ರಮೇಶ ಬಾಬು ಹಾಗೂ ಪತ್ರಕರ್ತ ಶಿವಕುಮಾರ ಅವರನ್ನು ವಿಧಾನ ಪರಿಷತ್ತಿಗೆ ನಾಮ ನಿರ್ದೇಶನ ಮಾಡಲು ಕಾಂಗ್ರೆಸ್ ಹೈಕಮಾಂಡ್ ಸಮ್ಮತಿ ನೀಡಿತ್ತು.


ನಿಮ್ಮ ಕಾಮೆಂಟ್ ಬರೆಯಿರಿ