ಅಡ್ಯನಡ್ಕ ಕರ್ಣಾಟಕ ಬ್ಯಾಂಕ್‌ ಶಾಖೆಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಹಣ-ಒಡವೆ ಕಳ್ಳತನ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಅಡ್ಯನಡ್ಕ ಸಮೀಪದ ಕರ್ಣಾಟಕ ಬ್ಯಾಂಕ್ ಶಾಖಾ ಕಚೇರಿಯಿಂದ ಬುಧವಾರ ರಾತ್ರಿ ಭಾರಿ ಪ್ರಮಾಣದ ನಗ ಹಾಗೂ ನಗದು ಕಳ್ಳತನ ಮಾಡಲಾಗಿದೆ ಎಂದು ವರದಿಯಾಗಿದೆ.
ಕಿಟಕಿಯ ಸರಳುಗಳನ್ನು ಕತ್ತರಿಸಿ ಬ್ಯಾಂಕಿನ ಕಟ್ಟಡದೊಳಗೆ ನುಗ್ಗಿದ ಕಳ್ಳರು ಹಣ-ಆಭರಣಗಳನ್ನು ಕದ್ದೊಯ್ದಿದ್ದಾರೆ. ಕೃತ್ಯ ನಡೆದಿರುವುದು ಗುರುವಾರ ಬೆಳಿಗ್ಗೆ ಗೊತ್ತಾಗಿದೆ.
ಕಳ್ಳರು ಗ್ಯಾಸ್ ಕಟ್ಟರ್ ಬಳಸಿ ಬ್ಯಾಂಕಿನ ಹಿಂಭಾಗದಿಂದ ಒಳಗೆ ಪ್ರವೇಶಿಸಿದ್ದಾರೆ ಎಂದು ಹೇಳಲಾಗಿದೆ. ಬ್ಯಾಂಕ್ ಲಾಕರ್ ಗೆ ಕಳ್ಳರು ಕನ್ನ ಹಾಕಿದ್ದು, ಭಾರೀ ಪ್ರಮಾಣ ಚಿನ್ನ ನಗದು ದರೋಡೆಯಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಶ್ವಾನದಳ, ಬೆರಳಚ್ಚು ಮತ್ತು ಫಾರೆನ್ಸಿಕ್ ತಂಡದಿಂದ ಪರಿಶೀಲನೆ ನಡೆಸಿದ್ದಾರೆ.
ಕೃತ್ಯವು ಫೆ. 7ರ ಬುಧವಾರ ರಾತ್ರಿ 2:30 ರಿಂದ ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ನಡೆದಿರಬಹುದು ಎಂದು ಶಂಕಿಸಲಾಗಿದೆ.ಬ್ಯಾಂಕಿನ ಹಿಂಬದಿಯಲ್ಲಿರುವ ಅಂಗಳದಲ್ಲಿ ವಾಹನ ನಿಲ್ಲಿಸಿ, ಕೃತ್ಯ ಎಸಗಿ, ಬಳಿಕ ನಗ ನಗದು ಕಳ್ಳತನ ಮಾಡಿರಬಹುದು ಎಂಬ ಅನುಮಾನವಿದೆ.
ಗುರುವಾರ ಬೆಳಗ್ಗೆ ಬ್ಯಾಂಕ್‌ ಸಿಬ್ಬಂದಿ ಕಚೇರಿಗೆ ಬಂದ ನಂತರ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ರಿಷ್ಯಂತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಂಕ್‌ ಒಳಗಡೆಯ ಸಿಸಿಟಿವಿಯನ್ನು ಪೊಲೀಸರು ಅದನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಬ್ಯಾಂಕ್‌ ಮುಂಭಾಗ ಹಾಗೂ ಹಿಂಭಾಗ ಅಥವಾ ಹೆದ್ದಾರಿಯಲ್ಲಿ ಯಾವುದೇ ಸಿಸಿಟಿವಿ ಇರಲಿಲ್ಲ ಎನ್ನಲಾಗಿದೆ. ಅಕ್ಕಪಕ್ಕದ ಅಂಗಡಿಗಳಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ವಾಹನದ ಚಲನವಲನದ ದೃಶ್ಯಗಳು ಸೆರೆಯಾಗಿದೆಯೇ ಎಂದು ಪರಿಶೀಲಿಸಲಾಗುತ್ತಿದೆ.
ಪ್ರಕರಣವನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಿಲಾಗಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆಯನ್ನು ನಡೆಸಲಾಗುತ್ತಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement