ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಳಿ ಇನ್ನೂ ಮುಂದುವರಿಯುತ್ತದೆ. ಮುಂದಿನ 3 ದಿನಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಶೀತ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.
ಹವಾಮಾನ ಇಲಾಖೆಯು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದ್ದರೆ, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದೆ ಎಂದು ಹೇಳಿದೆ. ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮೈಸೂರು ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾಸನ, ಚಿಕ್ಕಮಗಳೂರು, ಕೊಡಗು, ವಿಜಯನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿಯ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಇಳಿಕೆಯಾಗುವ ಸಾಧ್ಯತೆಯಿದೆ. ಬೀದರ, ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ, ಗದಗ, ಕಲಬುರಗಿ, ಧಾರವಾಡ, ಕೊಪ್ಪಳ, ಬಳ್ಳಾರಿ, ರಾಯಚೂರಿನಲ್ಲಿ ಚಳಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ನಿಮ್ಮ ಕಾಮೆಂಟ್ ಬರೆಯಿರಿ